ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಂಸದ ಜಗನ್ ಮೋಹನ್ ರೆಡ್ಡಿ ಬಂಧನ

ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವಿರೋಧಿಸಿ ಸಂಸತ್ ಭವನ ಮುತ್ತಿಗೆ ಹಾಕಲು ಹೊರಟ್ಟಿದ್ದ ವೈಎಸ್‌ಆರ್ ಕಾಂಗ್ರೆಸ್ ಮುಖ್ಯಸ್ಥ ಹಾಗೂ...

Vishwanath S
Updated On : 17 Feb 2014, 6:48 am

ನವದೆಹಲಿ: ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವಿರೋಧಿಸಿ ಸಂಸತ್ ಭವನ ಮುತ್ತಿಗೆ ಹಾಕಲು ಹೊರಟ್ಟಿದ್ದ, ವೈಎಸ್‌ಆರ್ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಸಂಸದ ಜಗನ್ ಮೋಹನ್ ರೆಡ್ಡಿರನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿ, ತಮ್ಮ ವಶಕ್ಕೆ ಪಡೆದಿದ್ದಾರೆ.

ಅಖಂಡ ಆಂಧ್ರಪ್ರದೇಶಕ್ಕೆ ಆಗ್ರಹಿಸಿ ಜಗನ್ ದೆಹಲಿಯ ಜಂತರ್ ಮಂತರ್‌ನಲ್ಲಿ ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದು, ಸಂಜೆ ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ವೇಳೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತ ಕ್ರಮವಾಗಿ ಜಗನ್ ಮತ್ತು ತಾಯಿ ವಿಜಯಮ್ಮ ಅವರನ್ನು ಪೊಲೀಸರು ಬಂಧಿಸಿದ್ದು, ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಈ ವೇಳೆ ಮಾತನಾಡಿದ ಜಗನ್,  ಯಾವುದೇ ಕಾರಣಕ್ಕು ಆಂಧ್ರಪ್ರದೇಶ ವಿಭಜನೆಗೆ ನನ್ನ ಬೆಂಬಲವಿಲ್ಲ ಎಂದು ಹೇಳಿದ್ದಾರೆ. 

ಜಂತರ್ ಮಂತರ್‌ನಲ್ಲಿ ವೈಎಸ್‌ಆರ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಪ್ರತಿಭಟನೆಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement