4 ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಡಾ. ಅಮಿತ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,
ಡಾ. ಶಾಲಿನಿ ರಜನೀಶ್ ಪ್ರಧಾನ ಕಾರ್ಯದರ್ಶಿ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ,
ಪಾಂಡುರಂಗ ಬೊಮ್ಮಯ್ಯ ನಾಯ್ಕ್, ಬಳ್ಳಾರಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ,
ಎಂ. ಮಂಜುನಾಥ್ ನಾಯ್ಕ್, ಹಾವೇರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿದೆ.