ತೆಲಂಗಾಣ ವಿಧೇಯಕ ಅಂಗೀಕಾರ ಪ್ರಶ್ನಿಸಿ ಸುಪ್ರೀಂ ಮೊರೆ
ತೆಲಂಗಾಣ ವಿಧೇಯಕ ಅಂಗೀಕಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಸೀಮಾಂಧ್ರ ಸಂಸದ ಕೆ.ಎಸ್. ರಾವ್ ಅವರು ಮಂಗಳವಾರ ತಿಳಿಸಿದ್ದಾರೆ.
ನವದೆಹಲಿ: ತೆಲಂಗಾಣ ವಿಧೇಯಕ ಅಂಗೀಕಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಸೀಮಾಂಧ್ರ ಸಂಸದ ಕೆ.ಎಸ್. ರಾವ್ ಅವರು ಮಂಗಳವಾರ ತಿಳಿಸಿದ್ದಾರೆ.
ತೀವ್ರ ವಿರೋಧದ ನಡುವೆಯೂ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವಿಧೇಯಕಕ್ಕೆ ಲೋಕಸಭೆಯಲ್ಲಿ ಅಂಗೀಕಾರ ದೊರೆತ್ತಿದ್ದು, ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ಸಂಸದ ರಾವ್ ಅವರು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೀಮಾಂಧ್ರ ಸಂಸದರ ವಿರೋಧದ ನಡುವೆಯೂ ಪ್ರತ್ಯೇಕ ತೆಲಂಗಾಣ ವಿಧೇಯಕವನ್ನು ಅಂಗೀಕರಿಸಿದ್ದಾರೆ. ಯಾವುದೇ ಕಾರಣಕ್ಕೂ ಆಂಧ್ರ ಪ್ರದೇಶ ಇಬ್ಭಾಗಕ್ಕೆ ನಾವು ಒಪ್ಪುವುದಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.