ತೇಜ್ಪಾಲ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ತೆಹೆಲ್ಕಾ ಮಾಜಿ ಸಂಪಾದಕ..
ಪಣಜಿ: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ತೆಹೆಲ್ಕಾ ಮಾಜಿ ಸಂಪಾದಕ ತರುಣ್ ತೇಜ್ಪಾಲ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಗೋವಾ ಕೋರ್ಟ್ ಮಂಗಳವಾರ ಮುಂದೂಡಿದೆ.
ತೇಜ್ಪಾಲ್ ವಿರುದ್ಧ ಗೋವಾ ಪೊಲೀಸರು ನಿನ್ನೆಯಷ್ಟೆ 2,684 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದರು. ಚಾರ್ಜ್ಶೀಟ್ ಸಲ್ಲಿಸಿದ ಹಿನ್ನೆಲ್ಲೆಯಲ್ಲಿ ತೇಜ್ಪಾಲ್ ತಕ್ಷಣ ಜಾಮೀನು ಕೋರಿ ಗೋವಾ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಆದರೆ ತಕ್ಷಣ ಜಾಮೀನು ನೀಡಲು ನಿರಾಕರಿಸಿರುವ ಕೋರ್ಟ್, ವಿಚಾರಣೆಯನ್ನು ಮಾರ್ಚ್ 4ಕ್ಕೆ ಮುಂದೂಡಿದೆ.
ಸಹೋದ್ಯೋಗಿ ಪತ್ರಕರ್ತೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ತೇಜ್ಪಾಲ್ರನ್ನು ನ.30ರಂದು ಬಂಧಿಸಲಾಗಿತ್ತು. ಸದ್ಯ ಅವರನ್ನು ಗೋವಾದ ವಾಸ್ಕೋದಲ್ಲಿನ ಸಬ್ಜೈಲಿನಲ್ಲಿ ಇರಿಸಲಾಗಿದೆ.