ಡಬ್ಬಿಂಗ್ ವಿರೋಧಿಸಿ ಸಾ.ರಾ.ಗೋವಿಂದು ರಾಜಿನಾಮೆ
ಡಬ್ಬಿಂಗ್ ವಿರೋಧಿಸಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಸ್ಥಾನಕ್ಕೆ ಸಾ.ರಾ.ಗೋವಿಂದು ಅವರು ಬುಧವಾರ ರಾಜಿನಾಮೆ ನೀಡಿದ್ದಾರೆ.
ಬೆಂಗಳೂರು: ಡಬ್ಬಿಂಗ್ ವಿರೋಧಿಸಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಸ್ಥಾನಕ್ಕೆ ಸಾ.ರಾ.ಗೋವಿಂದು ಅವರು ಬುಧವಾರ ರಾಜಿನಾಮೆ ನೀಡಿದ್ದಾರೆ.
ಡಬ್ಬಿಂಗ್ ವಿರೋಧಿಸಿ ಸಾ.ರಾ.ಗೋವಿಂದು ಅವರೊಂದಿಗೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರಾದ ಉಮೇಶ ಬಣಕಾರ್ ಹಾಗೂ ದಿನೇಶ್ ಗಾಂಧಿ ಅವರು ಸಹ ತಮ್ಮ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದು, ಈ ಮೂವರ ರಾಜಿನಾಮೆಯನ್ನು ಇಂದು ನಡೆದ ವಾಣಿಜ್ಯ ಮಂಡಳಿಯ ಸಭೆಯಲ್ಲಿ ಅಂಗೀಕರಿಸಲಾಗಿದೆ.
ಇನ್ನು ಡಬ್ಬಿಂಗ್ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಚಲನಚಿತ್ರ ವಾಣಿಜ್ಯ ಮಂಡಳಿಯ ಎದುರು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ವಾಣಿಜ್ಯ ಮಂಡಳಿಯ ಸದಸ್ಯರ ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು.