ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ತೇಜಪಾಲ್‌ಗೆ ಸಿಸಿಟಿವಿ ದೃಶ್ಯಾವಳಿ ನೀಡಲು ಕೋರ್ಟ್ ಸಮ್ಮತಿ

ತೆಹಲ್ಕಾ ಪತ್ರಿಕೆಯ ಮಾಜಿ ಸಂಪಾದ ತರುಣ್ ತೇಜಪಾಲ್ ಅವರಿಗೆ ಸಿಸಿಟಿವಿ ದೃಶ್ಯಾವಳಿಗಳ ನಕಲು ನೀಡಲು ನ್ಯಾಯಾಲಯ ಸಮ್ಮತಿ ಸೂಚಿಸಿದೆ.

Srinivasa Murthy VN
Updated On : 19 Feb 2014, 3:36 am

ಪಣಜಿ: ತೆಹಲ್ಕಾ ಪತ್ರಿಕೆಯ ಮಾಜಿ ಸಂಪಾದ ತರುಣ್ ತೇಜಪಾಲ್ ಅವರಿಗೆ ಸಿಸಿಟಿವಿ ದೃಶ್ಯಾವಳಿಗಳ ನಕಲು ನೀಡಲು ನ್ಯಾಯಾಲಯ ಸಮ್ಮತಿ ಸೂಚಿಸಿದೆ.

ಈ ಹಿಂದೆ ತಮ್ಮ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ರೂಪಿಸಲಾಗುತ್ತಿದ್ದು, ಪ್ರಕರಣವನ್ನು ಹಾದಿ ತಪ್ಪಿಸಲಾಗುತ್ತಿದೆ. ಹೀಗಾಗಿ ತಮಗೆ ಸಿಸಿಟಿವಿ ದೃಶ್ಯಾವಳಿಯ ನಕಲು ನೀಡಬೇಕು ಎಂದು ತೇಜಪಾಲ್ ಪರ ವಕೀಲರು ಮನವಿ ಮಾಡಿದ್ದರು. ಇಂದು ಪ್ರಕರಣದ ವಿಚಾರಣೆಯನ್ನು ನಡೆಸಿದ ನ್ಯಾ.ಅನುಜಾ ಪ್ರಭು ದೇಸಾಯಿ ಅವರು, ತರುಣ್‌ತೇಜಪಾಲ್‌ಗೆ ಗೋವಾದ ಬ್ಯಾಂಬೊಲಿನ್ ಹೊಟೆಲ್‌ನ ಸಿಸಿಟಿವಿ ದೃಶ್ಯಾವಳಿಗಳ ನಕಲನ್ನು ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಸಹೋದ್ಯೋಗಿ ಪತ್ರಕರ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಪ್ರಸ್ತುತ ಗೋವಾ ಕ್ರೈಂ ಬ್ರಾಂಚ್ ಅಧಿಕಾರಿಗಳು ತನಿಖೆ ನಡೆಸುತಿದ್ದಾರೆ. ತನಿಖಾಧಿಕಾರಿಗಳ ಮೇಲೆ ಅವಿಶ್ವಾಸ ವ್ಯಕ್ತಪಡಿಸಿರುವ ತರುಣ್ ತೇಜಪಾಲ್ ಅವರು, ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಾವಳಿಗಳೇ ಪ್ರಮುಖ ಸಾಕ್ಷಿಗಳಾಗಿದ್ದು, ತಮಗೂ ನಕಲು ಪ್ರತಿಯನ್ನು ನೀಡಬೇಕು ಎಂದು ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement