ಬೆಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ
ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 3.30ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಲೋಕಸಭಾ...
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 3.30ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಲೋಕಸಭಾ ಚುನವಾಣೆ ಅಭ್ಯರ್ಥಿಗಳ ಆಯ್ಕೆ ಚರ್ಚಿಸುವ ಸಾಧ್ಯತೆ ಇದೆ.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಭಾಗವಹಿಸುತ್ತಿದ್ದು, ಚಿಕ್ಕಮಗಳೂರಿನಿಂದ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಸ್ಪರ್ಧೆ ಬಗ್ಗೆ ಚಿಕ್ಕಮಗಳೂರು ಜಿಲ್ಲಾ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ.
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಹಾಗೂ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅವರಿಗೆ ಟಿಕೆಟ್ ನೀಡುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.