ಮಾರ್ಚ್ ಮೊದಲ ವಾರದಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ
ಮಹಾ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಜ್ಜಾಗಿದ್ದು, ಮಾರ್ಚ್ ಮೊದಲ ವಾರದಲ್ಲಿ ಸಾರ್ವತ್ರಿಕ ಚುನಾವಣೆ ದಿನಾಂಕವನ್ನು...
ನವದೆಹಲಿ: ಮಹಾ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಜ್ಜಾಗಿದ್ದು, ಮಾರ್ಚ್ ಮೊದಲ ವಾರದಲ್ಲಿ ಸಾರ್ವತ್ರಿಕ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಲೋಕಸಭೆ ಚುನಾವಣೆಯನ್ನು ಏಪ್ರಿಲ್ ಮಧ್ಯಭಾಗದಲ್ಲಿ ಆರಂಭಿಸಿ ಮೇ ಮೊದಲ ವಾರದಲ್ಲಿ ಒಟ್ಟು ಆರು ಹಂತಗಳಲ್ಲಿ ಚುನಾವಣೆ ಪ್ರಕ್ರಿಯೆ ನಡೆಸಲು ಚುನಾವಣಾ ಆಯೋಗ ಸಜ್ಜಾಗಿದೆ ಎನ್ನಲಾಗಿದೆ.
ಹಾಲಿ ಲೋಕಸಭೆಯ ಅವಧಿ ಜೂನ್ 1 ರಂದು ಅಂತ್ಯಗೊಳ್ಳಲಿದ್ದು, ಮೇ 31ರೊಳಗೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ. ಆ ನಿಟ್ಟನಲ್ಲಿ ಮೇ 15ರೊಳಗೆ ಚುನಾವಣೆ ಪ್ರಕ್ರಿಯೆಯನ್ನು ಮುಗಿಸುವ ಹೊಣೆ ಚುನಾವಣಾ ಆಯೋಗದ ಮೇಲಿದೆ.