ಸೀಮಾಂಧ್ರಗೆ ವಿಶೇಷ ಪ್ಯಾಕೇಜ್ ನೀಡಿ: ಸೋನಿಯಾ
ಸೀಮಾಂಧ್ರ ಭಾಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಪ್ರಧಾನಿ ಸಿಂಗ್ ಅವರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಲಹೆ..
ನವದೆಹಲಿ: ವಿಭಜನೆಗೊಳ್ಳುತ್ತಿರುವ ಸೀಮಾಂಧ್ರ ಭಾಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಲಹೆ ನೀಡಿದ್ದಾರೆ.
ಲೋಕಸಭೆಯಲ್ಲಿ ತೆಲಂಗಾಣ ಮಸೂದೆ ಅಂಗೀಕಾರಗೊಳ್ಳುತ್ತಿದ್ದಂತೆಯೇ ಇಂದು ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿರುವ ಸೋನಿಯಾ ಗಾಂಧಿ ಅವರು, ಸೀಮಾಂಧ್ರ ಭಾಗದ ಅಭಿವೃದ್ಧಿಗಾಗಿ ಮುಂದಿನ ಐದು ವರ್ಷಗಳ ಕಾಲ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸಲಹೆ ನೀಡಿದ್ದಾರೆ.