ಆಂಧ್ರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು
ಅತಂತ್ರ ಸ್ಥಿತಿ ನಿರ್ಮಾಣವಾಗಿರುವ ಆಂಧ್ರಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ವರದಿ ಸಲ್ಲಿಸಲಾಗಿದೆ.
ಹೈದರಾಬಾದ್: ತೆಲಂಗಾಣ ವಿಚಾರವಾಗಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ರಾಜಿನಾಮೆಯಿಂದಾಗಿ ಅತಂತ್ರ ಸ್ಥಿತಿ ನಿರ್ಮಾಣವಾಗಿರುವ ಆಂಧ್ರಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ವರದಿ ಸಲ್ಲಿಸಲಾಗಿದೆ.
ಆಂಧ್ರಪ್ರದೇಶ ರಾಜ್ಯಪಾಲ ಇ.ಎಸ್.ಎಲ್.ನರಸಿಂಹನ್ ಅವರು ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದು, ವರದಿಯಲ್ಲಿ ಆಂಧ್ರಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಶಿಫಾರಸ್ಸು ಮಾಡಿದ್ದಾರೆ.
ಲೋಕಸಭೆಯಲ್ಲಿ ತೆಲಂಗಾಣ ಮಸೂದೆ ಅಂಗೀಕಾರವನ್ನು ವಿರೋಧಿಸಿದ್ದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ತಮ್ಮ ಸ್ಥಾನಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ಸಲ್ಲಿಸಿದ್ದರು. ಕಿರಣ್ ಕುಮಾರ್ ರೆಡ್ಡಿ ಅವರೊಂದಿಗೆ ಅವರ 50 ಬೆಂಬಲಿಗ ಸಚಿವ ಮತ್ತು ಶಾಸಕರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು. ಹೀಗಾಗಿ ಆಂಧ್ರ ಪ್ರದೇಶ ಸರ್ಕಾರ ಅತಂತ್ರವಾಗಿತ್ತು.