ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೇಜ್ರಿವಾಲ್ ಈಗ ಪ್ರಧಾನಿ ಆಕಾಂಕ್ಷಿ: ಅಣ್ಣಾ ಹಜಾರೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬದಲಾಗಿದ್ದು, ಈಗ ಅವರು ದೇಶದ ಪ್ರಧಾನಿ ಹುದ್ದೆಯ ಆಕಾಂಕ್ಷಿ..

Lingaraj Badiger
Updated On : 20 Feb 2014, 1:49 am

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬದಲಾಗಿದ್ದು, ಈಗ ಅವರು ದೇಶದ ಪ್ರಧಾನಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಅವರು ಗುರುವಾರ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಮಾತನಾಡಿರುವ ಹಜಾರೆ, ಅಮ್ ಆದ್ಮಿ ಪಕ್ಷದ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದರು. ಕೇಜ್ರಿವಾಲ್ ಅವರು ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಅವರು ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಬೇಕಿತ್ತು. ಆದರೆ ಇನ್ನು ಅಲ್ಲಿಯೇ ವಾಸಿಸುತ್ತಿದ್ದಾರೆ ಎಂದು ಹೇಳಿದರು.

ಕೇಜ್ರಿವಾಲ್ ಅವರಿಗೆ ಪ್ರಧಾನಿಯಾಗಬೇಕು ಎಂಬ ಉದ್ದೇಶ ಇರುವುದು ಸ್ಪಷ್ಟ ಎಂದು ಅಣ್ಣಾ ಹಜಾರೆ ತಿಳಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಹಾಗೂ ಅಣ್ಣಾ ಹಜಾರೆ ಇಬ್ಬರು ಒಟ್ಟಾಗಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಆರಂಭಿಸಿದ್ದರು. ಆದರೆ ಕೇಜ್ರಿವಾಲ್ ಅವರು ರಾಜಕೀಯ ಪಕ್ಷ ಸ್ಥಾಪಿಸಿದ ನಂತರ ಇಬ್ಬರೂ ದೂರವಾಗಿದ್ದರು.

76 ವರ್ಷದ ಅಣ್ಣಾ ಹಜಾರೆ ಅವರು ಇತ್ತೀಚಿಗಷ್ಟೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement