ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

'ನಮೋ' ಕಾರ್ಯಕ್ರಮಕ್ಕೆ ಹಾಜರಾಗದ 5 ವಿದ್ಯಾರ್ಥಿಗಳ 'ಸಸ್ಪೆಂಡ್'

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಗೈರು ಹಾಜರಾದ 5 ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಅಮಾನತು ಮಾಡಿದ ಘಟನೆ ಬೆಳಕಿಗೆ ಬಂದಿದೆ.

Srinivasa Murthy VN
Updated On : 20 Feb 2014, 5:10 am

ಅಹ್ಮದಾಬಾದ್: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಗೈರು ಹಾಜರಾದ 5 ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಅಮಾನತು ಮಾಡಿದ ಘಟನೆ ಬೆಳಕಿಗೆ ಬಂದಿದೆ.

ವಡೋದರಾದಲ್ಲಿರುವ 'ನಿರ್ವಚನ' ಶಾಲಾ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಅಮಾನತುಗೊಳಿಸಿದೆ. ಕಳೆದ ವಾರ ವಡೋದರದಲ್ಲಿ ನಿರ್ಮಾಣಗೊಂಡಿದ್ದ ನೂತನ ಕ್ರೀಡಾಂಗಣದ ಉಧ್ಘಾಟನಾ ಸಮಾರಂಭದಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಅವರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮಕ್ಕೆ ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ನಿರ್ವಚನ ಶಾಲಾ ಆಡಳಿತ ಮಂಡಳಿ ಆದೇಶ ಹೊರಡಿಸಿತ್ತು.

ಆದರೆ ಅಂದು ಐದು ವಿದ್ಯಾರ್ಥಿಗಳು ಹಾಜರಾಗದ ಹಿನ್ನಲೆಯಲ್ಲಿ ನಿರ್ವಚನ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿತ್ತು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳ ಪೋಷಕರ ಮೇಲೆ ಒತ್ತಡ ಹೇರಿದೆ. ಯಾವುದೇ ಕಾರಣಕ್ಕೂ ವಿಷಯವನ್ನು ಬಹಿರಂಗ ಪಡಿಸದಂತೆ ಪೋಷಕರನ್ನು ಒತ್ತಾಯಿಸಿದೆ.

ನಿನ್ನೆ ಮಾಧ್ಯಮಗಳಲ್ಲಿ ತಮ್ಮ ಮಕ್ಕಳ ಆಮಾನತು ಕ್ರಮವನ್ನು ಖಂಡಿಸಿದ್ದ ಪೋಷಕರು, ಇಂದು ಶಾಲಾ ಆಡಳಿತ ಕ್ರಮವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ತಮ್ಮ ಮಕ್ಕಳು ತರಗತಿಗೆ ಹಾಜರಾಗದ ಕಾರಣ ಅವರನ್ನು ಅಮಾನುತ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಪ್ರಕರಣಕ್ಕೆ ಇದೀಗ ರಾಜಕೀಯ ಲೇಪನವಾಗುತ್ತಿದ್ದು, ನಿರ್ವಚನ ಶಾಲಾ ಕ್ರಮವನ್ನು ಕಾಂಗ್ರೆಸ್ ಟೀಕಿಸಿದೆ. ಕಾಂಗ್ರೆಸ್ ಮುಖಂಡ ನರೇಂದ್ರ ರಾವತ್ ಅವರು, ಮೋದಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬಿಜೆಪಿ ಪಕ್ಷವು ಇಂತಹ ಕಾರ್ಯಗಳನ್ನು ಮಾಡುತ್ತಿದ್ದು, ಕಾರ್ಯಕ್ರಮಕ್ಕೆ ಜನರನ್ನು ಬಲವಂತವಾಗಿ ಕ್ರೋಢೀಕರಿಸುತ್ತಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement