ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಐಪಿಎಲ್ ಗೆ ಭದ್ರತೆ ನೀಡಲು ಸಾಧ್ಯವಿಲ್ಲ: ಶಿಂಧೆ

ಬಿಸಿಸಿಐನ ಮಿಲಿಯನ್ ಡಾಲರ್ ಬೇಬಿ ಐಪಿಎಲ್ಗೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾರೆ.

Srinivasa Murthy VN
Updated On : 21 Feb 2014, 6:18 am

ನವದೆಹಲಿ: ಬಿಸಿಸಿಐನ ಮಿಲಿಯನ್ ಡಾಲರ್ ಬೇಬಿ ಐಪಿಎಲ್ಗೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೇ ಐಪಿಎಲ್ ಸರಣಿ ಆಯೋಜನೆಯಾಗಿರುವುದರಿಂದ ಐಪಿಎಲ್ಗೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಸುಶೀಲ್ ಕುಮಾರ್ ಶಿಂಧೆ ಸ್ಪಷ್ಟಪಡಿಸಿದ್ದಾರೆ. ಇದೀಗ ಐಪಿಎಲ್ ಕ್ರಿಕೆಟ್ ಸರಣಿಯನ್ನು ಅನಿವಾರ್ಯವಾಗಿ ಭಾರತದಿಂದ ಹೊರಗೆ ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸಿದೆ. ಮೂಲಗಳ ಪ್ರಕಾರ 2009ರಲ್ಲಿ ಆಯೋಜಿಸಲಾಗಿದ್ದ ದ.ಆಫ್ರಿಕಾ ದೇಶದಲ್ಲಿಯೇ ಈ ಬಾರಿಯ ಐಪಿಎಲ್ ಸರಣಿಯನ್ನು ಆಯೋಜಿಸುವ ಸಾಧ್ಯತೆ ಇದೆ.

ಕಳೆದ ವಾರ ಬೆಂಗಳೂರಿನಲ್ಲಿ ನಡೆದ ಬಿಸಿಸಿಐ ಪದಾಧಿಕಾರಿಗಳ ಸಭೆಯಲ್ಲಿಯೂ ಇದೇ ಅಂಶವನ್ನು ಚರ್ಚಿಸಲಾಗಿದ್ದು, ಒಂದು ವೇಳೆ ಐಪಿಎಲ್ಗೆ ಕೇಂದ್ರ ಸರ್ಕಾರ ಭದ್ರತೆ ನೀಡಲು ನಿರಾಕರಿಸಿದರೆ ಸರಣಿಯನ್ನು ದ.ಆಫ್ರಿಕಾಗೆ ರವಾನಿಸುವ ಕುರಿತು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಅಂತಿಮ ತೀರ್ಮಾನ ಫೆಬ್ರವರಿ 28ರಂದು ಭುವನೇಶ್ವರದಲ್ಲಿ ನಡೆಯಲಿರುವ ಬಿಸಿಸಿಐ ಸಭೆಯಲ್ಲಿ ಕೈಗೊಳ್ಳಲಾಗುತ್ತದೆ.

2009ರ ಐಪಿಎಲ್ ಸರಣಿ ಕೂಡ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಆಯೋಜನೆಗೊಳ್ಳುವ ಮೂಲಕ ಅನಿವಾರ್ಯವಾಗಿ ಸರಣಿಯನ್ನು ದ.ಆಫ್ರಿಕಾಗೆ ರವಾನಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement