ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಗುಂಡು ಹಾರಿಸಿಕೊಂಡು ಸಿಆರ್ ಪಿಎಫ್ ಯೋಧ ಆತ್ಮಹತ್ಯೆ

ಹೊಟ್ಟೆಗೆ ಗುಂಡು ಹಾರಿಸಿಕೊಂಡು ಸಿಆರ್ ಪಿಎಫ್ ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಎನ್‌ಎಂಪಿಟಿಯಲ್ಲಿ ಶನಿವಾರ ನಡೆದಿದೆ...

Vishwanath S
Updated On : 22 Feb 2014, 12:50 pm

ಮಂಗಳೂರು: ಹೊಟ್ಟೆಗೆ ಗುಂಡು ಹಾರಿಸಿಕೊಂಡು ಸಿಆರ್ ಪಿಎಫ್ ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಎನ್‌ಎಂಪಿಟಿಯಲ್ಲಿ ಶನಿವಾರ ನಡೆದಿದೆ.

ಇಂದು ಬೆಳಗ್ಗೆ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ಯೋಧನನ್ನು ಮಹಾರಾಷ್ಟ್ರ ಮೂಲದ 38 ವರ್ಷದ ಕೆ.ಟಿ ಸಂದೀಪ್ ಸರ್ಕಟೆ ಎಂದು ಗುರುತಿಸಲಾಗಿದೆ.

ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪಣಂಬೂರ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement