ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಮಾರಣಾಂತಿಕ ಹಲ್ಲೆ

ನಗರದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ..

Lingaraj Badiger
Updated On : 25 Feb 2014, 11:43 am

ಬೆಂಗಳೂರು: ನಗರದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ದೀಪಾ ಕಾಂಪ್ಲೆಕ್ಸ್ ಬಳಿ ಈ ಘಟನೆ ನಡೆದಿದ್ದು, ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣಪ್ಪ ಅವರ ಮೇಲೆ ನಾಲ್ವರು ದುಷ್ಕರ್ಮಿಗಳು ತೀವ್ರ ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ಕಾರಣ ಇನ್ನು ತಿಳಿದು ಬಂದಿಲ್ಲ.

ಕೃಷ್ಣಪ್ಪ ಅವರು ಇಂದು ಬೆಳಗ್ಗೆ ಬ್ಯಾಡ್ಮಿಂಟನ್ ಆಡಲು ತೆರಳಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಅವರ ಮೇಲೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ಕೃಷ್ಣಪ್ಪ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement