ಸಹಾರಾ ಮುಖ್ಯಸ್ಥರಿಗೆ 'ಸುಪ್ರೀಂ' ವಾರೆಂಟ್ ಜಾರಿ
ಷೇರು ಹಣ ಹಿಂದುರಿಗಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾರಾ ಸಂಸ್ಥೆಯ ಮುಖ್ಯಸ್ಥ ಸುಬ್ರತೋ ರಾಯ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ನವದೆಹಲಿ: ಸಹರಾ ಸಂಸ್ಥೆಯ ಹೂಡಿಕೆದಾರರಿಗೆ ಷೇರು ಹಣ ಹಿಂದುರಿಗಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾರಾ ಸಂಸ್ಥೆಯ ಮುಖ್ಯಸ್ಥ ಸುಬ್ರತೋ ರಾಯ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಇದಕ್ಕೂ ಮೊದಲು ಪ್ರಕರಣ ಸಂಬಂಧ ತಾವು ಪದೇ ಪದೇ ವಿಚಾರಣೆಗಾಗಿ ಖುದ್ದು ಹಾಜರಾಗಲು ಸಾಧ್ಯವಿಲ್ಲ. ಹೀಗಾಗಿ ತಮಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂದು ಸಹರಾ ಸಂಸ್ಥೆಯ ಮುಖ್ಯಸ್ಥ ಸುಬ್ರತೋ ರಾಯ್ ಅವರು ಮನವಿ ಮಾಡಿದ್ದರು. ಆದರೆ ಅವರ ಈ ಮನವಿಯನ್ನು ನಿನ್ನೆ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಅಲ್ಲದೆ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿತ್ತು.
ಆದರೆ ಇಂದಿನ ವಿಚಾರಣೆಯಲ್ಲಿ ಸುಬ್ರತೋ ರಾಯ್ ಅವರು ಹಾಜರಾಗದ ಹಿನ್ನಲೆಯಲ್ಲಿ ಅವರ ವಿರುದ್ಧ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಸಹರಾ ಸಂಸ್ಥೆಯ ಸಾವಿರಾರು ಷೇರುದಾರರ ಹಣ ವಾಪಾಸ್ ನೀಡದ ಪ್ರಕರಣ ಸಂಬಂಧ ಈ ಹಿಂದೆ ಸಹಾರಾ ಸಂಸ್ಥೆಯ ಮೂವರು ನಿರ್ದೇಕರಿಗೆ ಮತ್ತು ಸಹರಾ ಅಧೀನದ ಎರಡು ಕಂಪನಿಗಳಿಗೆ ಸುಪ್ರೀಂ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು.