ಸಹಾರಾ ಮುಖ್ಯಸ್ಥ ಸುಬ್ರತೋ ರಾಯ್ ಬಂಧನ?
ಸಹಾರಾ ಮುಖ್ಯಸ್ಥ ಸುಬ್ರತೋ ರಾಯ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾದ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲೂ ಪೊಲೀಸರು...
ಲಖನೌ: ಸಹಾರಾ ಮುಖ್ಯಸ್ಥ ಸುಬ್ರತೋ ರಾಯ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾದ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲೂ ಪೊಲೀಸರು ಅವರನ್ನು ಬಂಧಿಸುವ ಸಾಧ್ಯತೆಗಳಿವೆ.
ಸಹರಾ ಸಂಸ್ಧೆಯ ಹೂಡಿಕೆದಾರರಿಗೆ ಷೇರು ಹಣ ಹಿಂದುರಿಗಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರತೋ ರಾಯ್ ವಿರುದ್ಧ ನಿನ್ನೆ ಸುಪ್ರೀಂಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೊಲೀಸರು ಲಖನೌನಲ್ಲಿರುವ ಸುಬ್ರತೋ ರಾಯ್ರ ನಿವಾಸಕ್ಕೆ ತಲುಪಿದ್ದು, ಅವರೊಂದಿಗೆ ಚರ್ಚಿಸುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಸಿದಂತೆ ವಿಚಾರಣೆಗೆ ಖುದ್ದು ಹಾಜರಾಗವಂತೆ ಕೋರ್ಟ್ ಆದೇಶಿಸಿತ್ತು. ಆದರೆ ವಿಚಾರಣೆಗೆ ಸತತವಾಗಿ ಹಾಜರಾಗದ ಹಿನ್ನೆಲೆಯಲ್ಲಿ ಸುಬ್ರತೋ ರಾಯ್ ವಿರುದ್ಧ ಸುಪ್ರೀಂಕೋರ್ಟ್ ನಿನ್ನೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.
ಸಹರಾ ಸಂಸ್ಥೆಯ ಸಾವಿರಾರು ಷೇರುದಾರರ ಹಣ ವಾಪಾಸ್ ನೀಡದ ಪ್ರಕರಣ ಸಂಬಂಧ ಈ ಹಿಂದೆ ಸಹಾರಾ ಸಂಸ್ಥೆಯ ಮೂವರು ನಿರ್ದೇಶಕರಿಗೆ ಮತ್ತು ಸಹರಾ ಅಧೀನದ ಎರಡು ಕಂಪನಿಗಳಿಗೆ ಸುಪ್ರೀಂಕೋರ್ಟ್ ಸಮನ್ಸ್ ಜಾರಿ ಮಾಡಿತ್ತು.