ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.100ರಷ್ಟು ಹೆಚ್ಚಳ

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.100 ರಷ್ಟು ಹೆಚ್ಚಳ ಮಾಡಲಾಗಿದ್ದು, ಜನವರಿ 1 ರಿಂದಲೇ ಈ ನೂತನ ಆದೇಶ ಜಾರಿಗೆ ಬರಲಿದೆ.

Srinivasa Murthy VN
Updated On : 28 Feb 2014, 4:26 am

ನವದಹೆಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.100 ರಷ್ಟು ಹೆಚ್ಚಳ ಮಾಡಲಾಗಿದ್ದು, ಜನವರಿ 1 ರಿಂದಲೇ ಈ ನೂತನ ಆದೇಶ ಜಾರಿಗೆ ಬರಲಿದೆ.

ನವದೆಹಲಿಯಲ್ಲಿ ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.100 ರಷ್ಟು ಏರಿಕೆ ಮಾಡಲು ನಿರ್ಧರಿಸಲಾಗಿದ್ದು, ಜನವರಿ 1ರಿಂದಲೇ ಈ ನೂತನ ಆದೇಶ ಜಾರಿಗೆ ಬರುವಂತೆ ಆದೇಶ ನೀಡಲಾಗಿದೆ. ಈ ಹಿಂದಿನ ಅಂದರೆ 2013ರ ಸೆಪ್ಟೆಂಬರ್ ತಿಂಗಳಲ್ಲಿ ಕೇಂದ್ರ ಸರ್ಕಾರ ಶೇ.90ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿತ್ತು. ವರ್ಷ ತುಂಬುದೊರಳಗಾಗಿಯೇ ಅಂದರೆ ಈಗ ಅದಕ್ಕೆ ಮತ್ತೆ ಶೇ.10 ರಷ್ಟನ್ನು ಸೇರಿಸಿ ಶೇ.100ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ.

ಕೇಂದ್ರ ಸರ್ಕಾರದ ಈ ನೂತನ ಆದೇಶದ ವ್ಯಾಪ್ತಿಗೆ ದೇಶಾದ್ಯಂತವಿರುವ ಸುಮಾರು 50 ಲಕ್ಷ ಉದ್ಯೋಗಿಗಳು ಮತ್ತು 30 ಲಕ್ಷ ನಿವೃತ್ತ ನೌಕರರು ಒಳಪಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement