ಹೆಚ್ಚಿನ ಚಿಕಿತ್ಸೆಗಾಗಿ ಅಂಬರೀಶ್ ವಿದೇಶಕ್ಕೆ
ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿರುವ ಹಿರಿಯ ನಟ, ವಸತಿ ಸಚಿವ ಅಂಬರೀಷ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ...
ಬೆಂಗಳೂರು: ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿರುವ ಹಿರಿಯ ನಟ, ವಸತಿ ಸಚಿವ ಅಂಬರೀಷ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶನಿವಾರ ಬೆಳಿಗ್ಗೆ 3ಗಂಟೆಗೆ ವಿದೇಶಕ್ಕೆ ಕರೆದೊಯ್ಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಳಗಿನ ಜಾವ 3ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಏರ್ ಆಂಬ್ಯುಲೆನ್ಸ್ ಮೂಲಕ ಅಂಬರೀಶ್ ಅವರನ್ನು ವಿದೇಶಕ್ಕೆ ಕರೆದೊಯ್ಯಲಿದ್ದು, ಸಿಂಗಾಪುರ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಅಂಬರೀಶ್ ಜೊತೆ ಪತ್ನಿ ಸುಮಲತಾ, ಪುತ್ರ ಹಾಗೂ ಇಬ್ಬರು ಪ್ಯಾರಾಮೆಡಿಕಲ್ ವೈದ್ಯರ ತಂಡ ಹಾಗೂ ರಾಜ್ಯ ಸರ್ಕಾರದ ವಿಶೇಷ ಅಧಿಕಾರಿ ವಿದೇಶಕ್ಕೆ ತೆರಳಲಿದ್ದಾರೆ.
ಈ ಸಂಬಂಧ ವಿಕ್ರಂ ವೈದ್ಯರು ಬೆಳಗಿನ ಜಾವ 3ಗಂಟೆಗೆ ಪತ್ರಿಕಾಗೋಷ್ಟಿ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.