ಅಲ್ಪಸಂಖ್ಯಾತರನ್ನು ಸಿಎಂ ಸಿದ್ದು ಕಡೆಗಣಿಸಿದ್ದಾರೆ: ಹ್ಯಾರಿಸ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಿದ್ದಾರೆ ಎಂದು ಅವರದ್ದೇ ಪಕ್ಷದ..
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಿದ್ದಾರೆ ಎಂದು ಅವರದ್ದೇ ಪಕ್ಷದ ಶಾಸಕ ಎನ್.ಎ.ಹ್ಯಾರಿಸ್ ಅವರು ಶನಿವಾರ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾತ ಸಮಾವೇಶದಲ್ಲಿ ಮಾತನಾಡಿದ ಶಾಂತಿನಗರ ಕಾಂಗ್ರೆಸ್ ಶಾಸಕ ಹ್ಯಾರಿಸ್, ಸಿದ್ದರಾಮಯ್ಯ ಅವರು 1 ಲಕ್ಷ 30ಸಾವಿರ ಕೋಟಿ ರುಪಾಯಿ ಬಜೆಟ್ ಮಂಡಿಸಿದ್ದಾರೆ. ಆ ಬಜೆಟ್‌ನಲ್ಲಿ ಶೇ.1ರಷ್ಟ ಹಣವನ್ನು ಸಹ ಅಲ್ಪಸಂಖ್ಯಾತರಿಗೆ ಮೀಸಲಿಟ್ಟಿಲ್ಲ ಎಂದು ದೂರಿದ್ದಾರೆ.
ಸಿದ್ದರಾಮಯ್ಯ ಅವರು ತಮ್ಮ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ನಾಲ್ಕು ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಕೇವಲ ಮೂರು ಸ್ಥಾನ ಮಾತ್ರ ನೀಡಿದ್ದಾರೆ. ಹೀಗಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇನ್ನು ಒಂದು ಸ್ಥಾನ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಸಮ್ಮುಖದಲ್ಲೇ ಹ್ಯಾರಿಸ್ ಒತ್ತಾಯಿಸಿದರು.