ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಂದಕಕ್ಕೆ ಉರುಳಿದ ಬಸ್: 25 ಮಂದಿ ದುರ್ಮರಣ

ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ಸೊಂದು ಅಹ್ಮದನಗರ ಜಿಲ್ಲೆಯ ಮಾಳಶೇಜ್ ಘಾಟ್‌ನಲ್ಲಿ ..

Lingaraj Badiger
Updated On : 2 Jan 2014, 1:35 am

ಅಹ್ಮದನಗರ: ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ಸೊಂದು ಅಹ್ಮದನಗರ ಜಿಲ್ಲೆಯ ಮಾಳಶೇಜ್ ಘಾಟ್‌ನಲ್ಲಿ ಗುರುವಾರ ಬೆಳಗ್ಗೆ ಕಂದಕಕ್ಕೆ ಉರುಳಿ ಬಿದ್ದಿದ್ದು, ದುರಂತದಲ್ಲಿ 25 ಮಂದಿ ದುರ್ಮರಣ ಹೊಂದಿದ್ದಾರೆ.

ವಿಠ್ಠಲವಾಡಿಯಿಂದ ಅಹ್ಮದನಗಕ್ಕೆ ತೆರಳುತ್ತಿದ್ದ ವೇಳೆ ಮಾಳಶೇಜ್ ಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿದೆ. ದುರಂತದಲ್ಲಿ 25 ಮಂದಿ ಮೃತಪಟ್ಟಿದ್ದು, 13ಕ್ಕು ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ.

ಅಪಘಾತಕ್ಕೀಡಾದ ಬಸ್ ಮಹಾರಾಷ್ಟ್ರದ ಥಾಣೆ ಡಿಪೋಗೆ ಸೇರಿದ್ದು, ಬಸ್‌ನಲ್ಲಿ ಒಟ್ಟು 55 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement