ಬಿಜೆಪಿಯಲ್ಲಿ ಕೆಜೆಪಿ ವಿಲೀನಕ್ಕೆ ಬಿಎಸ್ವೈ ಸ್ಪೀಕರ್ಗೆ ಮನವಿ
ತಮ್ಮ ಪಕ್ಷ ಕೆಜೆಪಿಯನ್ನು ಬಿಜೆಪಿಯಲ್ಲಿ ವಿಲೀನಗೊಳಿಸುವಂತೆ ಮಾಜಿ ಮುಖ್ಯಮಂತ್ರಿ..
ಬೆಂಗಳೂರು: ತಮ್ಮ ಪಕ್ಷ ಕೆಜೆಪಿಯನ್ನು ಬಿಜೆಪಿಯಲ್ಲಿ ವಿಲೀನಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಯಡಿಯೂರಪ್ಪ ಅವರು ಇಂದು ಮಧ್ಯಾಹ್ನ ವಿಧಾನಸೌಧದಲ್ಲಿರುವ ಸ್ವೀಕರ್ ಕಚೇರಿಗೆ ತೆರಳಿ, ಕೆಜೆಪಿಯನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ, ಕೆಜೆಪಿ ಶಾಸಕರಿಗೆ ಬಿಜೆಪಿಯ ಸ್ಥಾನಮಾನಗಳನ್ನು ನೀಡುವಂತೆ ಮನವಿ ಮಾಡಿದರು.
ಸ್ಪೀಕರ್ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ವಿಲೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸ್ಪೀಕರ್ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಮತ್ತು ಅನಂತಕುಮಾರ್ ನೇತೃತ್ವದ ತಂಡ ನಿನ್ನೆ ಸಂಜೆ ಖಾಸಗಿ ಹೊಟೇಲ್ನಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಅಧಿಕೃತ ಆಹ್ವಾನ ನೀಡಿದರು. ಇದಕ್ಕೆ ಸಮ್ಮತಿಸಿದ ಯಡಿಯೂರಪ್ಪ, ಕೆಜೆಪಿಯನ್ನು ಬಿಜೆಪಿಯಲ್ಲಿ ವಿಲೀನಗೊಳಿಸುವುದಾಗಿ ಪ್ರಕಟಿಸಿದ್ದರು.
ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಜತೆ ಕೆಜೆಪಿ ವಿಲೀನವಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಜೆಡಿಎಸ್ ಅಧಿಕೃತ ಪ್ರತಿಪಕ್ಷ ಸ್ಥಾನಮಾನ ಕಳೆದುಕೊಳ್ಳುವುದು ಬಹುತೇಕ ನಿಶ್ಚಿತವಾಗಿದೆ.