ಪ್ರತಿಪಕ್ಷ ಸ್ಥಾನ ಕೈತಪ್ಪಲಿದೆ ಅಂತ ಗೊತ್ತಿತ್ತು: ಹೆಚ್‌ಡಿಕೆ
ಬಿಜೆಪಿಯಲ್ಲಿ ಕೆಜೆಪಿ ವಿಲೀನವಾಗುವುದರಿಂದ ಜೆಡಿಎಸ್‌ನ ಅಧಿಕೃತ ಪ್ರತಿಪಕ್ಷ ಸ್ಥಾನ ಕೈತಪ್ಪಲಿದೆ ಎಂಬುದು ನನಗೆ ಮೊದಲೇ ತಿಳಿದಿತ್ತು ಎಂದು ಶನಿವಾರ ಮಾಜಿ...
ಬೆಂಗಳೂರು: ಬಿಜೆಪಿಯಲ್ಲಿ ಕೆಜೆಪಿ ವಿಲೀನವಾಗುವುದರಿಂದ ಜೆಡಿಎಸ್‌ನ ಅಧಿಕೃತ ಪ್ರತಿಪಕ್ಷ ಸ್ಥಾನ ಕೈತಪ್ಪಲಿದೆ ಎಂಬುದು ನನಗೆ ಮೊದಲೇ ತಿಳಿದಿತ್ತು ಎಂದು ಶನಿವಾರ ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಈ ಸಂಬಂಧ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ಸ್ಥಾನ ಕೈತಪ್ಪುತ್ತದೆ ಎಂದು ನನಗೆ ಗೊತ್ತಿತ್ತು. ಈ ಬಗ್ಗೆ ನನಗೆ ಯಾವುದೇ ಬೇಸರವಿಲ್ಲ. ಪ್ರತಿಪಕ್ಷ ಸ್ಥಾನದಲ್ಲಿ ಇದ್ದಷ್ಟು ದಿನ ಉತ್ತಮವಾಗಿ ನಿಭಾಯಿಸಿರುವುದಾಗಿ ಹೆಚ್‌ಡಿಕೆ ತಿಳಿಸಿದ್ದಾರೆ.
ಬಿಜೆಪಿ ಮತ್ತು ಕೆಜೆಪಿ ವಿಲೀನ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿ ಮಾಡಿ ಪ್ರತಿಪಕ್ಷ ಸ್ಥಾನ ನೀಡುವಂತೆ ಮನವಿ ಮಾಡಿದ್ದರು. ಸ್ಪೀಕರ್ ಸಹ ಇದಕ್ಕೆ ಸಮ್ಮತಿಸಿದ್ದು, ಕಾನೂನು ತಜ್ಞರ ಜೊತೆ ಚರ್ಚಿಸಿ ತೀರ್ಮಾನಕೈಗೊಳ್ಳಲಾಗುವುದು ಎಂದಿದ್ದಾರೆ.