ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸಲ್ಲ: ಕೇಜ್ರಿವಾಲ್
2014ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶನಿವಾರ ಸ್ಪಷ್ಟಪಡಿಸಿದ್ದಾರೆ...
ನವದೆಹಲಿ: 2014ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶನಿವಾರ ಸ್ಪಷ್ಟಪಡಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಎಎಪಿ ಪಕ್ಷ ದೇಶದ ಎಲ್ಲಾ ಭಾಗಗಳಿಂದಲೂ ಸ್ಪರ್ಧಿಸಲು ತೀರ್ಮಾನಿಸಿದ್ದು, ಆ ನಿಟ್ಟಿನಲ್ಲಿ ಪಕ್ಷ ಕಾರ್ಯೊನ್ಮುಕವಾಗಿದೆ. ಆದರೆ ಈ ಚುನಾವಣೆಯಲ್ಲಿ ನಾನು ಕಣಕ್ಕಿಳುವುದಿಲ್ಲ. ಆದರೆ ಎಎಪಿ ಪಕ್ಷದ ಗೆಲುವುಗಾಗಿ ಶ್ರಮಿಸುವೆ ಹಾಗೂ ದೇಶಾದ್ಯಂತ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ.
ರಾಷ್ಟ್ರರಾಜಕಾರಣದತ್ತ ಗಮನ ಹರಿಸಿರುವ ಆಮ್ ಆದ್ಮಿ ಪಕ್ಷ(ಎಎಪಿ) ಲೋಕಸಭೆ ಚುನಾವಣೆಗಾಗಿ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದು, ಮುಂದಿನ 15 ದಿನಗಳೊಳಗಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.