ಏಪ್ರಿಲ್ನಲ್ಲಿ ಲೋಕಸಭಾ ಚುನಾವಣೆ ಸಾಧ್ಯತೆ
ನವದೆಹಲಿ: ಲೋಕಸಭಾ ಚುನಾವಣೆಯನ್ನು ಏಪ್ರಿಲ್ ತಿಂಗಳ ಮಧ್ಯಭಾಗದಲ್ಲಿ ನಡೆಸಲು ಚುನಾವಣಾ ಆಯೋಗ ಪೂರ್ವ ತಯಾರಿ ನಡೆಸುತ್ತಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ದೇಶದಾದ್ಯಂತ ಐದು ಹಂತಗಳಲ್ಲಿ ಮತದಾನ ನಡೆಯುವ ಸಾಧ್ಯತೆಗಳಿದ್ದು, ಏಪ್ರಿಲ್ ಮಧ್ಯಭಾಗ ಅಥವಾ ಮೇ ಮೊದಲ ವಾರದಲ್ಲಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಆಯೋಗ ನಿರ್ಧರಿಸಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ನಿರ್ದಿಷ್ಟ ದಿನಾಂಕವನ್ನು ಪ್ರಕಟಿಸಲು ಕೇಂದ್ರ ಚುನಾವಣಾ ಆಯೋಗ ತೀರ್ಮಾನಿಸಿದೆ.
ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಓಡಿಶಾ, ಆಂಧ್ರಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಸಲಾಗುವುದು ಎಂದು ಆಯೋಗದ ಮೂಲಗಳು ತಿಳಿಸಿವೆ.