ಕಾಂಗ್ರೆಸ್ ಸಭೆ ಕರೆದ ಪ್ರಿಯಾಂಕಾ; ರಾಹುಲ್ ಪ್ರಧಾನಿ ಅಭ್ಯರ್ಥಿ?
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಂಗಳವಾರ ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ...
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಂಗಳವಾರ ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ಪ್ರಸ್ತುತ ಸಭೆ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ನಡೆಯಲಿದೆ.
ಪ್ರಿಯಾಂಕಾ ಜತೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್, ಕೇಂದ್ರ ಸಚಿವ ಜೈರಾಂ ರಮೇಶ್ ಮತ್ತು ಹಿರಿಯ ನಾಯಕ ಜನಾರ್ದನ್ ದ್ವಿವೇದಿ ಮೊದಲಾದವರು ಭಾಗವಹಿಸಲಿದ್ದಾರೆ.
ಆದಾಗ್ಯೂ, ಬಲ್ಲಮೂಲಗಳ ಪ್ರಕಾರ ಈ ಸಭೆಯಲ್ಲಿ ರಾಹುಲ್ ಪಾಲ್ಗೊಳ್ಳುವುದಿಲ್ಲ.
ಜನವರಿ 17ಕ್ಕೆ ನಡೆಯಲಿರುವ ಕಾಂಗ್ರೆಸ್ ಸಭೆಗೆ ಪೂರ್ವಭಾವಿಯಾಗಿ ಈ ಸಭೆ ಕರೆದಿದ್ದು, ಇದರಲ್ಲಿ ರಾಹುಲ್ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸುವುದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗುತ್ತಿದೆ.
ಆದಾಗ್ಯೂ, ಈ ಸಭೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಅಲೆಯ ಮುಂದೆ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ನ್ನು ಕಾಂಗ್ರೆಸ್ ಯಾವ ರೀತಿ ಬಿಂಬಿಸುತ್ತದೆ ಎಂಬ ಕುತೂಹಲ ದೇಶದ ಜನರಿಗಿದೆ.