ಕಾಶ್ಮೀರದಲ್ಲಿ ಉಗ್ರರ ದಾಳಿ: ಓರ್ವ ಪೊಲೀಸ್ ಸಾವು
ಜಮ್ಮು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ಸೋಪೋರ್ ನಗರದಲ್ಲಿ ಭದ್ರತಾಪಡೆ ಮತ್ತು ಉಗ್ರರ ನಡುವೆ ನಡೆದ ಜಟಾಪಟಿಯಲ್ಲಿ ಓರ್ವ...
ಶ್ರೀನಗರ: ಜಮ್ಮು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ಸೋಪೋರ್ ನಗರದಲ್ಲಿ ಭದ್ರತಾಪಡೆ ಮತ್ತು ಉಗ್ರರ ನಡುವೆ ನಡೆದ ಜಟಾಪಟಿಯಲ್ಲಿ ಓರ್ವ ಪೊಲೀಸ್ ಸಾವನ್ನಪ್ಪಿದ್ದು, ಮೂವರಿಗೆ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ.
ಮೂವರು ಉಗ್ರರು ಮನೆಯೊಂದರಲ್ಲಿ ಅವಿತು ಕುಳಿತಿದ್ದಾರೆ ಎಂಬ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಪೊಲೀಸರು ಉಗ್ರರಿಗಾಗಿ ಹುಡುಕಾಟ ನಡೆಸುತ್ತಿದ್ದ ವೇಳೆ ಎನ್ಕೌಂಟರ್ ನಡೆದಿದೆ.
ಪೊಲೀಸರು ಮನೆಯ ಹತ್ತಿರ ತಲುಪುತ್ತಿದ್ದಂತೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಅದರಲ್ಲಿ ಓರ್ವ ಪೊಲೀಸ್ ಸಾವನ್ನಪ್ಪಿದ್ದಾರೆ.
ಗಾಯಗೊಂಡ ಪೊಲೀಸರನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.