ನನ್ನ ವಿರುದ್ಧದ ಆರೋಪವೆಲ್ಲ ಆಧಾರರಹಿತ: ನ್ಯಾ.ಗಂಗೂಲಿ
ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ...
ನವದೆಹಲಿ: ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಧೀಶ ಎ.ಕೆ ಗಂಗೂಲಿ ತನ್ನ ಮೇಲಿನ ಆರೋಪಗಳೆಲ್ಲವೂ ಆಧಾರ ರಹಿತ ಎಂದು ಹೇಳಿದ್ದಾರೆ.
ತಮ್ಮ ರಾಜಿನಾಮೆ ಪತ್ರದಲ್ಲಿ ನ್ಯಾ.ಗಂಗೂಲಿಯವರು ತಮ್ಮ ಮೇಲಿನ ಆರೋಪಗಳನ್ನೆಲ್ಲಾ ನಿರಾಕರಿಸಿದ್ದು, ಆರೋಪದ ಮೇರೆಗೆ ತಮ್ಮನ್ನು ವಜಾಗೊಳಿಸಲು ರಾಷ್ಟ್ರಪತಿಗೆ ಮೊರೆ ಹೋಗಿರುವ ವಿಷಯದ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಅದೇ ವೇಳೆ ತಾನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇನೆ ಎಂದು ಗಂಗೂಲಿ ಹೇಳಿದ್ದಾರೆ.
ಸೋಮವಾರ ಗಂಗೂಲಿ ಅವರು ಗವರ್ನರ್ನ್ನು ಭೇಟಿ ಮಾಡಿ ರಾಜಿನಾಮೆ ಪತ್ರ ಸಲ್ಲಿಸಿದ್ದರು. ಮಂಗಳವಾರ ಗವರ್ನರ್ ರಾಜಿನಾಮೆ ಪತ್ರವನ್ನು ಸ್ವೀಕರಿಸಿ, ಈ ಬಗ್ಗೆ ಸರ್ಕಾರಕ್ಕೆ ತಿಳಿಸಿದ್ದಾರೆ.