ಆಮ್ ಆದ್ಮಿ ಪಕ್ಷದ ಕಚೇರಿ ಮೇಲೆ ದಾಳಿ
ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಆಮ್ ಆದ್ಮಿ ಪಕ್ಷ(ಎಎಪಿ)ದ ಕೇಂದ್ರ ಕಚೇರಿ 'ಕೌಶಂಬಿ'...
ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಆಮ್ ಆದ್ಮಿ ಪಕ್ಷ(ಎಎಪಿ)ದ ಕೇಂದ್ರ ಕಚೇರಿ 'ಕೌಶಂಬಿ' ಮೇಲೆ ಬುಧವಾರ ಹಿಂದೂಪರ ಸಂಘಟನೆಗಳು ದಾಳಿ ನಡೆಸಿವೆ.
ಎಎಪಿ ಮುಖಂಡ ಪ್ರಶಾಂತ್ ಭೂಷಣ್ ಅವರ ವಿವಾತಾದ್ಮಕ ಹೇಳಿಕೆ ಖಂಡಿಸಿ ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಹಿಂದೂ ರಕ್ಷ ದಳ ಹಾಗೂ ಶ್ರೀರಾಮ ಸೇನೆ ಕಾರ್ಯಕರ್ತರು 'ಕೌಶಂಬಿ' ಕಚೇರಿ ಮೇಲೆ ದಾಳಿ ಮಾಡಿ, ಕಚೇರಿಯೊಳಗೆ ಇದ್ದ ದಾಖಲೆಗಳನ್ನು ಕಿಡಿಗೇಡಿಗಳು ನಾಶಪಡಿಸಿದ್ದಾರೆ.
30ರಿಂದ 40 ಜನರಿದ್ದ ದುಷ್ಕರ್ಮಿಗಳ ತಂಡ ಆಪ್ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದೆ. ದಾಳಿಯ ಹಿನ್ನೆಲೆಯಲ್ಲಿ ಎಎಪಿ ಕಚೇರಿಗೆ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪ್ರಶಾಂತ್ ಭೂಷಣ್ ಅವರು ಕಾಶ್ಮೀರದಲ್ಲಿ ಸೇನೆ ನಿಯೋಜನೆಗೆ ಜನಮತ ಸಂಗ್ರಹಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.