ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಜೆಪಿ, ಆರ್‌ಎಸ್‌ಎಸ್ ವಿರುದ್ದ ಪ್ರಶಾಂತ್ ಭೂಷಣ್ ಕಿಡಿ

ಆಮ್ ಆದ್ಮಿ ಪಕ್ಷ(ಎಎಪಿ)ದ ಕಚೇರಿ ಮೇಲೆ ಇಂದು ಹಿಂದೂಪರ ಸಂಘಟನೆಗಳು ದಾಳಿ ನಡೆಸಿರುವುದಕ್ಕೆ ಸುಪ್ರೀಂ...

Mainashree
Updated On : 8 Jan 2014, 2:30 am

ನವದೆಹಲಿ: ಆಮ್ ಆದ್ಮಿ ಪಕ್ಷ(ಎಎಪಿ)ದ ಕಚೇರಿ ಮೇಲೆ ಇಂದು ಹಿಂದೂಪರ ಸಂಘಟನೆಗಳು ದಾಳಿ ನಡೆಸಿರುವುದಕ್ಕೆ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಹಾಗೂ ಎಎಪಿ ನಾಯಕ ಪ್ರಶಾಂತ್ ಭೂಷಣ್ ಅವರು ಕಿಡಿಕಾರಿದ್ದಾರೆ.

ಭಾರತೀಯ ಜನತಾ ಪಕ್ಷ(ಬಿಜಿಪಿ) ಹಾಗೂ ರಾಷ್ಟ್ರೀಯ ಸ್ವಯಂ ಸೇವಕ್ ಸಂಘ(ಆರ್‌ಎಸ್‌ಎಸ್)ದ ವಿರುದ್ಧ ಅವರು ಕಿಡಿಕಾರಿದ್ದಾರೆ.
ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಎಎಪಿಯ ಕೇಂದ್ರ ಕಚೇರಿ ಮೇಲೆ ನಡೆಸಿದ ದಾಳಿಯ ಹಿಂದೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕೈವಾಡವಿದೆ ಎಂದು ಪ್ರಶಾಂತ್ ಆರೋಪಿಸಿದ್ದಾರೆ.

ಎಎಪಿ ಪಕ್ಷದ ಬೆಳವಣಿಗೆ ಬಿಜೆಪಿ ಮತ್ತು ಸಂಘ ಪರಿವಾರಗಳಿಗೆ ಭಯ ಹುಟ್ಟಿಸಿದೆ. ದೇಶದಲ್ಲಿ ಎಎಪಿ ಅಭಿವೃದ್ಧಿ ಹೊಂದುತ್ತಿರುವುದು ಬಿಜೆಪಿ ಮತ್ತು ಸಂಘಪರಿವಾರಗಳು ಹತಾಶೆಗೊಳಗಾಗಿದೆ ಎಂದು ಭೂಷಣ್ ಹೇಳಿದ್ದಾರೆ.

ಇಂದು ನಮ್ಮ ಕಚೇರಿ ಮೇಲೆ ದಾಳಿ ನಡೆಸಿದ ಆರೋಪಿಗಳೇ, ಹಿಂದೊಮ್ಮೆ ನನ್ನ ಮೇಲೆ ದಾಳಿ ಮಾಡಿದ್ದರು. ಅದರಲ್ಲಿ ವಿಷ್ಣು ಗುಪ್ತಾ ಪ್ರಮುಖ ವ್ಯಕ್ತಿ ಎಂದು ಆರೋಪಿಸಿದ್ದಾರೆ.

ಪ್ರಶಾಂತ್ ಭೂಷಣ್ ಅವರು ಕಾಶ್ಮೀರದಲ್ಲಿ ಸೇನೆ ನಿಯೋಜನೆಗೆ ಜನಮತ ಸಂಗ್ರಹಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಹಿಂದೂಪರ ಸಂಘಟನೆಗಳು ಇಂದು ಎಎಪಿ ಕಚೇರಿ ಮೇಲೆ ದಾಳಿ ನಡೆಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement