ಹಾವೇರಿಯಲ್ಲಿ 81ನೇ ಕನ್ನಡ ಸಾಹಿತ್ಯ ಸಮ್ಮೇಳನ
81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಯಲು ಕನ್ನಡ ಸಾಹಿತ್ಯ ಪರಿಷತ್ತು ಬುಧವಾರ ತೀರ್ಮಾನಿಸಿದೆ...
ಮಡಿಕೇರಿ: 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಯಲು ಕನ್ನಡ ಸಾಹಿತ್ಯ ಪರಿಷತ್ತು ಬುಧವಾರ ತೀರ್ಮಾನಿಸಿದೆ.
ಮಡಿಕೇರಿಯ ಖಾಸಗಿ ಹೊಟೇಲ್ನಲ್ಲಿ ಇಂದು ಸಂಜೆ ನಡೆದ ಕನ್ನಡ ಸಾಹಿತ್ಯ ಪರಿಷತ್ತು(ಕಸಾಪ)ನ ಕಾರ್ಯಕಾರಿ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಕನ್ನಡ ಸಾಹಿತ್ಯ ಪರಿಷತ್ತುನ ಅಧ್ಯಕ್ಷ ಪುಂಡಳೀಕ ಹಾಲಂಬಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಸಾಪದ 39 ಸದಸ್ಯರ ಪೈಕಿ 29 ಸದಸ್ಯರು ಹಾವೇರಿ ಪರ ಮತ ಚಲಾಯಿಸಿದ್ದಾರೆ.