ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 5 ನಿರ್ಣಯ ಅಂಗೀಕಾರ

ಕೊಡಗಿನಲ್ಲಿ ನಡೆಯುತ್ತಿರುವ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ನಾಡು, ನುಡಿಗೆ ಸಂಬಂಧಿಸಿದ ಐದು..

Lingaraj Badiger
Updated On : 9 Jan 2014, 3:49 am

ಮಡಿಕೇರಿ: ಕೊಡಗಿನಲ್ಲಿ ನಡೆಯುತ್ತಿರುವ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ನಾಡು, ನುಡಿಗೆ ಸಂಬಂಧಿಸಿದ ಐದು ನಿರ್ಣಯಗಳನ್ನು ಗುರುವಾರ ಅಂಗೀಕರಿಸಲಾಗಿದೆ.

ಇಂದು ನಡೆದ ಸಮಾರೋಪ ಸಮಾರಂಭದಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಸೇರಿದಂತೆ ಐದು ನಿರ್ಣಯಗಳನ್ನು ಪಾಸ್ ಮಾಡಲಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನದ ಐದು ನಿರ್ಣಯಗಳು

1. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಮತ್ತು ಗಡಿಭಾಗದ ಕನ್ನಡ ಶಾಲೆಗಳ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರಕ್ಕೆ ಒತ್ತಾಯ.

2. ಕನ್ನಡ ವಿರೋಧಿ ಎಂಇಎಸ್ ಶಾಸಕರ ವಿರುದ್ಧ ಕ್ರಮಕ್ಕೆ ಸಮ್ಮೇಳನದಲ್ಲಿ ಆಗ್ರಹ. ಎಂಇಎಸ್ ಶಾಸಕರ ಉದ್ಧಟತನಕ್ಕೂ ಖಂಡನೆ.

3. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಉಮೇಶ್ ಕತ್ತಿ ವಿರುದ್ಧ ಕ್ರಮಕ್ಕೆ ಒತ್ತಾಯ ಹಾಗೂ ರಾಜ್ಯ ವಿಭಜನೆಗೆ ಸಂಬಂಧಿಸಿದ ಹೇಳಿಕೆಗಳಿಗೆ ತೀವ್ರ ಖಂಡನೆ.

4. ಕೊಡಗು ಪ್ರತ್ಯೇಕತೆ ಹಾಗೂ ಉತ್ತರ ಕರ್ನಾಟಕ ವಿಭಜನೆಗೆ ವಿರೋಧ.

5. ಡಾ.ಕೆ.ಕಸ್ತೂರಿ ರಂಗನ್ ಸಮಿತಿ ವರದಿಯ ತಿರಸ್ಕಾರ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement