ಕೇಜ್ರಿವಾಲ್ ಭ್ರಷ್ಟಾಚಾರ ನಿಗ್ರಹ ಸಹಾಯವಾಣಿಗೆ 3 ಗಂಟೆಗಳಲ್ಲಿ 300ಕರೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರಂಭಿಸಿರುವ ಭ್ರಷ್ಟಾಚಾರ ನಿಗ್ರಹ ಸಹಾಯವಾಣಿ..
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರಂಭಿಸಿರುವ ಭ್ರಷ್ಟಾಚಾರ ನಿಗ್ರಹ ಸಹಾಯವಾಣಿ ಸಂಖ್ಯೆಗೆ 3 ಗಂಟೆಗಳಲ್ಲಿ 300 ಕರೆಗಳು ಬಂದಿವೆ.
ಭ್ರಷ್ಟಾಚಾರ ನಿಗ್ರಹಕ್ಕಾಗಿ ಕೇಜ್ರಿವಾಲ್ ಸರ್ಕಾರ ನಿನ್ನೆ ಭ್ರಷ್ಟಾಚಾರ ನಿಗ್ರಹ ಸಹಾಯವಾಣಿ ಸಂಖ್ಯೆ 011-27357169ಕ್ಕೆ ಚಾಲನೆ ನೀಡಿತ್ತು. ಈ ಸಂಖ್ಯೆ ಇಂದು ಬೆಳಗ್ಗೆ 8 ಗಂಟೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಆರಂಭವಾದ 3 ಗಂಟೆಗಳಲ್ಲೇ 300 ಕರೆಗಳು ಬಂದಿವೆ.
ಸಹಾಯವಾಣಿ ಸಂಖ್ಯೆಗೆ ಚಾಲನೆ ನೀಡಿ ಮಾತನಾಡಿದ್ದ ದೆಹಲಿ ಸಿಎಂ, ಯಾವುದೇ ಕೆಲಸಕ್ಕೂ ಅಧಿಕಾರಿಗಳು ಲಂಚ ಕೇಳಿದೊಡನೆ ಈ ಸಂಖ್ಯೆಗೆ ಕರೆ ಮಾಡಬಹುದು. ಕರೆ ಸ್ವೀಕರಿಸಿದವರು ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವುದು ಹೇಗೆ ಎಂಬ ಮಾಹಿತಿ ನೀಡುತ್ತಾರೆ. ಸ್ಟಿಂಗ್ ಆಪರೇಷನ್ ನಡೆದ 24 ಗಂಟೆಗಳಲ್ಲಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.
ದೆಹಲಿ ಜಾಗೃತ ದಳದ ತಂಡ ಈ ಸಹಾಯವಾಣಿಯನ್ನು ನೋಡಿಕೊಳ್ಳಲಿದ್ದು, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸರಿಯಾದ ದಾಖಲೆಗಳನ್ನು ನೀಡಿದರೆ 24 ಗಂಟೆಗಳಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಕೇಜ್ರಿವಾಲ್ ಅವರು ತಿಳಿಸಿದ್ದಾರೆ.