ಕೊಡಗು ಬಿಜೆಪಿ ಜಿಲ್ಲಾಧ್ಯಕ್ಷರ ಮೇಲೆ ಗುಂಡಿನ ದಾಳಿ
ಕೊಡಗು ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸುಜಾ ಕುಶಾಲಪ್ಪ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈಯ್ಯುವ ವಿಫಲ ಯತ್ನ ಗುರುವಾರ...
ವಿರಾಜಪೇಟೆ: ಕೊಡಗು ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸುಜಾ ಕುಶಾಲಪ್ಪ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈಯ್ಯುವ ವಿಫಲ ಯತ್ನ ಗುರುವಾರ ನಡೆದಿದೆ.
ಕೊಡಗು ಶಾಸಕ ಅಪ್ಪಚ್ಚು ರಂಜನ್ ಅವರ ಸಹೋದರ ಸುಜಾ ಕುಶಾಲಪ್ಪ ಅವರು ವಿರಾಜಪೇಟೆ ನಗರದಲ್ಲಿದ್ದ ವೇಳೆ ಆಲ್ಟೋ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಗುಂಡಿನ ದಾಳಿಯಲ್ಲಿ ಕುಶಾಲಪ್ಪ ಅವರ ಕುತ್ತಿಗೆಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.