ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಮೋದಿ ರಾಜಿನಾಮೆ ನೀಡಲಿ: ರಾಜ್ ಠಾಕ್ರೆ
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಮಹಾರಾಷ್ಟ್ರ ..
ನಾಶಿಕ್: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಗುರುವಾರ ಒತ್ತಾಯಿಸಿದ್ದಾರೆ.
ಪ್ರಧಾನಿ ಅಭ್ಯರ್ಥಿಯಾಗಿರುವ ಮೋದಿ ಅವರು ಕೇವಲು ಗುಜರಾತ್ಗೆ ಸೀಮಿತವಾಗದೇ ದೇಶಾದ್ಯಂತ ಕೆಲಸ ಮಾಡಬೇಕಿದೆ ಎಂದಿದ್ದಾರೆ.
ಗುಜರಾತ್ನ ಪ್ರಗತಿಯ ಬಗ್ಗೆ ನನಗೆ ಮೆಚ್ಚುಗೆ ಇದೆ. ಆದರೆ ಮೋದಿ ದೇಶದ ನಾಯಕರಾಗಿ ಸಾಧಿಸಬೇಕೆಂದರೆ ಅವರು ಮೊದಲ ತಮ್ಮ ಪದವಿಗೆ ರಾಜಿನಾಮೆ ನೀಡಬೇಕು ಎಂದು ರಾಜ್ ಠಾಕ್ರೆ ಹೇಳಿದ್ದಾರೆ.
ಇಂದು ನಾಶಿಕ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಮೋದಿ ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕಿತ್ತು ಎಂದು ರಾಜ್ ಠಾಕ್ರೆ ಹೇಳಿರುವುದಾಗಿ ವರದಿ ಮಾಡಲಾಗಿದೆ.