ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬೆಂಬಲಿಗರೊಂದಿಗೆ ಬಿಎಸ್‌ವೈ ಬಿಜೆಪಿ ಸೇರ್ಪಡೆ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಮಾತೃ ಪಕ್ಷ ಬಿಜೆಪಿಗೆ ಮರಳಿದ್ದಾರೆ.

Lingaraj Badiger
Updated On : 9 Jan 2014, 12:20 pm

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಮಾತೃ ಪಕ್ಷ ಬಿಜೆಪಿಗೆ ಮರಳಿದ್ದಾರೆ. ಇದರೊಂದಿಗೆ ಬಿಜೆಪಿ-ಕೆಜೆಪಿ ಅಧಿಕೃತವಾಗಿ ವಿಲೀನವಾದಂತಾಗಿದೆ.

ಇಂದು ಬೆಳಗ್ಗೆ 11ಗಂಟೆಯ ಸುಮಾರಿಗೆ ಮಲ್ಲೇಶ್ವರಂನಲ್ಲಿರುವ ಕಾಡುಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಎಸ್‌ವೈ, ಅಲ್ಲಿಂದ ತಮ್ಮ ಬೆಂಬಲಿಗರೊಂದಿಗೆ ಕಾಲ್ನಡಿಗೆ ಮೂಲಕ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ತೆರಳಿ ಪಕ್ಷದ ಸದಸ್ಯತ್ವ ಪಡೆದರು. .

ಯಡಿಯೂರಪ್ಪ ಅವರ ಜತೆಗೆ ಕೆಜೆಪಿ ಶಾಸಕರಾದ ಗುರುಪಾದಪ್ಪ ನಾಗಮಾರಪಲ್ಲಿ, ಯು.ಬಿ. ಬಣಕಾರ್, ವಿಶ್ವನಾಥ ಪಾಟೀಲ್, ರಾಜ್ಯ ಪದಾಧಿಕಾರಿಗಳಾದ ಶೋಭಾ ಕರಂದ್ಲಾಜೆ, ಸಿ.ಎಂ. ಉದಾಸಿ, ಎಂ.ಡಿ. ಲಕ್ಷ್ಮೀನಾರಾಯಣ್ ಸೇರಿದಂತೆ ಕೆಜೆಪಿಯ ರಾಜ್ಯ, ಜಿಲ್ಲೆ ಮತ್ತು ತಾಲೂಕು ಪದಾಧಿಕಾರಿಗಳು ಕೂಡ ಬಿಜೆಪಿ ಸೇರ್ಪಡೆಯಾದರು.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಸಂಸದ ಅನಂತ್ ಕುಮಾರ್, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹಾಗೂ ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮರಳಿ ಬಿಜೆಪಿ ಸೇರ್ಪಡೆಯಾಗುತ್ತಿರುವುದನ್ನು ನಾವು ಆಡಂಬರದಿಂದ ಆಚರಿಸಿಕೊಳ್ಳುತ್ತಿಲ್ಲ. ಸರಳವಾಗಿ ಪಕ್ಷದ ಸದಸ್ಯತ್ವ ಪಡೆಯುವ ಮೂಲಕ ಮಾತೃ ಪಕ್ಷಕ್ಕೆ ಮರಳುತ್ತಿದ್ದೇನೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement