ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸುಗ್ರೀವಾಜ್ಞೆಗೆ ಸಹಿ ಹಾಕಲು ರಾಜ್ಯಪಾಲರು ನಕಾರ

ಶಿಕ್ಷಕರ ಪಿಂಚಣಿ ಮತ್ತು ವೇತನ ಸೌಲಭ್ಯ ಕುರಿತು ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಗೆ ಅಂಕಿತ ಹಾಕಲು..

Lingaraj Badiger
Updated On : 9 Jan 2014, 3:16 am

ಬೆಂಗಳೂರು: ಶಿಕ್ಷಕರ ಪಿಂಚಣಿ ಮತ್ತು ವೇತನ ಸೌಲಭ್ಯ ಕುರಿತು ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಗುರುವಾರ ನಿರಾಕರಿಸಿದ್ದಾರೆ.

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರು ಸೇವೆಗೆ ಸೇರಿದ ದಿನದಿಂದ ಅನುದಾನಕ್ಕೆ ಒಳಪಟ್ಟ ದಿನದವರೆಗೂ ಸಂಬಳ, ಭತ್ಯೆ, ಪಿಂಚಣಿ ಸೌಲಭ್ಯ ನೀಡುವ ಕುರಿತು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ, ಅಂಗೀಕಾರಕ್ಕಾಗಿ ರಾಜ್ಯಪಾಲರಿಗೆ ಕಳುಹಿಸಿತ್ತು. ಆದರೆ ಸುಗ್ರೀವಾಜ್ಞೆಗೆ ಸಹಿ ಹಾಕಲು ನಿರಾಕರಿಸಿರುವ ರಾಜ್ಯಪಾಲರು, ಈ ಕುರಿತು ವಿವರಣೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿದ್ದಾರೆ.

ಅನುದಾನಕ್ಕೆ ಹಿಂದಿನ ಸೇವೆಯನ್ನು ಪರಿಗಣಿಸಲ್ಲ. ಆದರೆ ಅನುದಾನಕ್ಕೆ ಒಳಪಟ್ಟ ದಿನದಿಂದಲೇ ಅವರ ಪಿಂಚಣಿ ಮತ್ತು ವೇತನ ಸೌಲಭ್ಯವನ್ನು ಪರಿಗಣಿಸಲಾಗುವುದು. ಹಿಂದಿನ ಬಾಕಿ ನೀಡಿದರೆ ರಾಜ್ಯ ಸರ್ಕಾರಕ್ಕೆ ಭಾರಿ ನಷ್ಟ ಆಗಲಿದೆ ಎಂದು ರಾಜ್ಯಪಾಲರು ಅಭಿಪ್ರಾಯ ಪಟ್ಟಿದ್ದಾರೆ. ಅಲ್ಲದೆ ಸುಪ್ರೀಂ ಕೋರ್ಟ್ ಈ ಕುರಿತು ತೀರ್ಪು ನೀಡಿದ್ದು, ಸುಪ್ರೀಂ ವಿರುದ್ಧ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement