ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ತಿಂಗಳೊಳಗೆ ಅಧಿಕಾರಿಗಳ ವಿರುದ್ಧ ಕ್ರಮ: ಸಿದ್ದು

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯನ್ವಯ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ...

Vishwanath S
Updated On : 10 Jan 2014, 10:40 am

ಹೊಸಪೇಟೆ: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯನ್ವಯ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಹಂಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ವರದಿಯಲ್ಲಿ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಿದ್ದಾರೆ. ಲೋಕಾಯುಕ್ತ ವರದಿಯನ್ವಯ ಒಂದು ತಿಂಗಳೊಳಗಾಗಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಸಂಬಂಧ ತನಿಖೆ ನಡೆಸಿದ್ದ ಮಾಜಿ ಲೋಕಾಯುಕ್ತಾಧಿಕಾರಿ ಮತ್ತು ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಅವರು ಪ್ರಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳ ವಿರುದ್ಧ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement