ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೋದಿಗೆ ಕಿರಣ್ ಬೇಡಿ ಬೆಂಬಲ

ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರು ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ...

Lingaraj Badiger
Updated On : 10 Jan 2014, 10:37 am

ನವದೆಹಲಿ: ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ತಂಡದ ಸದಸ್ಯೆ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರು ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಬೆಂಬಲ ಘೋಷಿಸಿದ್ದಾರೆ.

ಕಿರಣ್ ಬೇಡಿ ಅವರು ನಿನ್ನೆ ತಡರಾತ್ರಿ ಬಿಜೆಪಿ ಪ್ರಧಾನಿ ಅಭ್ಯರ್ಥಿಗೆ ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದಾರೆ. ಸ್ಥಿರ ಹಾಗೂ ಉತ್ತಮ ಸರ್ಕಾರಕ್ಕಾಗಿ ನನ್ನ ಮತ ಮೋದಿಗೆ ಎಂದು ಕಿರಣ್ ಬೇಡಿ ಟ್ವಿಟ್ ಮಾಡಿದ್ದಾರೆ.

ಈ ಮುಂಚೆಯೂ ಅವರು ನರೇಂದ್ರ ಮೋದಿ ಬೆಂಬಲಕ್ಕೆ ನಿಂತಿದ್ದರು. ಮೋದಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಮತ್ತು ಗುಜರಾತ್‌ನಲ್ಲಿ ಅವರು ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ಜನತೆಗೆ ಸ್ಪಷ್ಟ ಸಂದೇಶ ನೀಡಿದಂತಾಗಿದೆ ಎಂದು ಬೇಡಿ ಕಳೆದ ವರ್ಷ ಅಹಮದಾಬಾದ್‌ನಲ್ಲಿ ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement