ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಾಹುಲ್ ಗಾಂಧಿಯಿಂದ ಪ್ರಮೋದಾದೇವಿ ಭೇಟಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇತ್ತೀಚಿಗೆ ನಿಧನರಾದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ..

Lingaraj Badiger
Updated On : 11 Jan 2014, 5:24 am

ಬೆಂಗಳೂರು: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇತ್ತೀಚಿಗೆ ನಿಧನರಾದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪತ್ನಿ ಪ್ರಮೋದಾದೇವಿ ಅವರನ್ನು ಭೇಟಿ ಮಾಡಲಿದ್ದಾರೆ.

2014ರ ಲೋಕಸಭೆ ಚುನಾವಣೆಗೆ ಪ್ರಣಾಳಿಕೆ ಸಿದ್ಧಪಡಿಸುವ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಸಮಾಲೋಚನೆ ನಡೆಸಲು ಇಂದು ಬೆಳಗ್ಗೆ ನಗರಕ್ಕೆ ಆಗಮಿಸಿರುವ ರಾಹುಲ್, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನಿಧನದ ಹಿನ್ನೆಲೆಯಲ್ಲಿ ಔಪಚಾರಿಕವಾಗಿ ಅವರ ಪತ್ನಿ ಪ್ರಮೋದಾದೇವಿ ಅವರನ್ನು ಭೇಟಿ ಮಾಡಲಿದ್ದಾರೆ.

ಅರಮನೆ ಮೈದಾನದಲ್ಲಿ ಬೆಳಗ್ಗೆ 10ಗಂಟೆಯಿಂದ ಕಾಂಗ್ರೆಸ್‌ನ ಚಿಂತನಾಗೋಷ್ಠಿ ನಡೆಯುತ್ತಿದ್ದು, ಗೋಷ್ಠಿಯ ಬಳಿಕ ರಾಹುಲ್ ಗಾಂಧಿ ಅವರು ಬೆಂಗಳೂರಿನ ಅರಮನೆಯಲ್ಲಿ ಪ್ರಮೋದಾದೇವಿ ಅವರನ್ನು ಭೇಟಿ ಮಾಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement