ಶರದ್ ಪವಾರ್ ಪಿಎಂ ಆದ್ರೆ ಖುಷಿ: ಶಿಂಧೆ
ಜನವರಿ 17ಕ್ಕೆ ನಡೆಯಲಿರುವ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ...
ಸೋಲಾಪುರ್ (ಮಹಾರಾಷ್ಟ್ರ): ಜನವರಿ 17ಕ್ಕೆ ನಡೆಯಲಿರುವ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವ ಸಾಧ್ಯತೆಗಳು ದಟ್ಟವಾಗಿರುವಾಗಲೇ, ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ, ಶರದ್ ಪವಾರ್ ಮುಖ್ಯಮಂತ್ರಿಯಾದರೆ ನಾನು ಖುಷಿ ಪಡುತ್ತೇನೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಿಂಧೆ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಯುಪಿಎ ಒಕ್ಕೂಟದ ಪ್ರಧಾನ ಸ್ಪರ್ಧಿಯಾಗಿದ್ದಾರೆ ಎಂದು ಹೇಳಿದ್ದಾರೆ.
1992ರಲ್ಲಿ ಪವಾರ್ ಪ್ರಧಾನಿ ರೇಸ್‌ನಲ್ಲ್ಲಿದ್ದರು ಎಂದು ಹೇಳಿದ ಶಿಂಧೆ, ತಾನು ರಾಜಕಾರಣ ಪ್ರವೇಶಿಸುವುದಕ್ಕೆ ಪವಾರ್ ಕಾರಣ ಎಂದು ಹೇಳಿದ್ದಾರೆ.
ಆದಾಗ್ಯೂ, ಪವಾರ್ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಇದ್ದವರೇ. ಆದರೆ ಸೋನಿಯಾ ಗಾಂಧಿ ಅವರ ವಿದೇಶಿ ಮೂಲ ವಿಷಯಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷದಿಂದ ಹೊರಗೆ ಬಂದಿದ್ದರು.
ಇತ್ತೀಚೆಗಷ್ಟೇ ತಾನು 2014ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪವಾರ್ ಹೇಳಿಕೆಯನ್ನೂ ನೀಡಿದ್ದರು. ಈಗಿನ ಎಲ್ಲ ವಿದ್ಯಮಾನಗಳನ್ನು ಗಮನಿಸಿದರೆ ಪವಾರ್ ರಾಜ್ಯಸಭೆ ಮೂಲಕ ಸಂಸತ್‌ಗೆ ಪ್ರವೇಶಿಸಲು ಯತ್ನಿಸುತ್ತಿದ್ದಾರೆ ಎಂಬುದು ರಾಜಕೀಯ ವಿಶ್ಲೇಷಕರ ಅಂಬೋಣ.