ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು: ಮೋದಿ
ಭ್ರಷ್ಟಾಚಾರದಿಂದ ಹೆಸರು ಮಾಡಿರುವ ಕಾಂಗ್ರೆಸ್ ನಾಯಕರಿಗೆ ಮುಂದಿನ ಚುನಾವಣೆಯಲ್ಲಿ ಮತಕೇಳಲು...
ಪಣಜಿ: ಭ್ರಷ್ಟಾಚಾರದಿಂದ ಹೆಸರು ಮಾಡಿರುವ ಕಾಂಗ್ರೆಸ್ ನಾಯಕರಿಗೆ ಮುಂದಿನ ಚುನಾವಣೆಯಲ್ಲಿ ಮತಕೇಳಲು ಹೋದಾಗ ನಾಚಿಕೆಯಾಗಬೇಕು ಎಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ಹಾಗೂ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಪಣಜಿಯಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ರ್ಯಾಲಿ ಕುರಿತು ಭಾಷಣ ಮಾಡುತ್ತಿದ್ದು, ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮುಕ್ತ ಭಾರತವನ್ನು ಜನರು ಬಯಸುತ್ತಿದ್ದಾರೆ. ಕಾಂಗ್ರೆಸ್‌ನ ದುರಾಡಳಿತ ಭ್ರಷ್ಟಾಚಾರದಿಂದ ಜನ ಬೇಸುತ್ತು ಹೋಗಿದ್ದಾರೆ ಎಂದು ಮೋದಿ ಆರೋಪಿಸಿದ್ದಾರೆ.
ಯುಪಿಎ ಅವಧಿಯಲ್ಲಿ ದೇಶ ಕೆಟ್ಟ ಸ್ಥಿತಿಗೆ ತಲುಪಿದೆ. ಆದ್ದರಿಂದ ಭಾರತವನ್ನು ಕಾಂಗ್ರೆಸ್ ಮುಕ್ತ ದೇಶವನ್ನಾಗಿಸಬೇಕು, ಜನರು ಇದನ್ನೇ ಬಯಸುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.
ಬಿಜೆಪಿ ಪಕ್ಷದ ಶಕ್ತಿಯಿಂದ ನಾವು ಇಲ್ಲಿವರೆಗೆ ಬಂದಿದ್ದೇವೆ. ನಮ್ಮ ಪಕ್ಷ ಪರಿಸರ ರಕ್ಷಣೆಗೆ ಮುಂದಾಗುವುದು. ಗಣಿಗಾರಿಕೆ ವಿಚಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡುಲಾಗುವುದು ಎಂದು ಅವರು ತಿಳಿಸಿದ್ದಾರೆ.