ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಗೋವಾದಲ್ಲಿ ಮೋದಿ ಭಾಷಣಕ್ಕೆ ಕ್ಷಣಗಣನೆ

ಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ಹಾಗೂ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಭಾಷಣಕ್ಕೆ...

Mainashree
Updated On : 12 Jan 2014, 3:32 am

ಪಣಜಿ: ಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ಹಾಗೂ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಭಾಷಣಕ್ಕೆ ವೇದಿಕೆ ಸಜ್ಜಾಗಿದ್ದು, ಇನ್ನೂ ಕೆಲವೇ ಗಂಟೆಗಳಲ್ಲಿ ರ್ಯಾಲಿ ಕುರಿತು ಭಾಷಣ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಗೋವಾದದಲ್ಲಿ ವಿಜಯ್ ಸಂಕಲ್ಪ ರ್ಯಾಲಿಗೆ ವೇದಿಕೆ ಸಜ್ಜಾಗಿದ್ದು, ಮೋದಿ ಭಾಷಣಕ್ಕೆ ಸಾವಿರಾರು ಜನರು ನೆರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ನಾಯಕ ಹಾಗೂ ಗೋವಾದ ಮುಖ್ಯಮಂತ್ರಿ ಮನೋಹರ್ ಪರಿಕಾರ್ ಅವರು ಮಾತನಾಡಿ, ಗೋವಾದ ಜನಸಂಖ್ಯೆಯಲ್ಲಿ ಶೇ. 10ರಷ್ಟು ಜನರು ಮೋದಿ ಅವರ ರ್ಯಾಲಿಯಲ್ಲಿ ಭಾಗವಹಿಸಿ ಇತಿಹಾಸ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.

ಇನ್ನೂ ಲಕ್ಷಗಟ್ಟಲೇ ಜನರು ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮೋದಿ ಅವರ ನೇತೃತ್ವದಲ್ಲಿ ನಡೆಯುವ ವಿಜಯ್ ಸಂಕಲ್ಪ ರ್ಯಾಲಿಯಲ್ಲಿ ಭಾಗವಹಿಸಲು ಪ್ರತಿ ಟಿಕೆಟ್‌ಗೆ 5ರು. ಶುಲ್ಕ ನಿಗದಿಪಡಿಸಿತ್ತು. ಇಷ್ಟಾದರು ಜನರು ರ್ಯಾಲಿಯಲ್ಲಿ ಭಾಗವಹಿಸಿಲು ಗೋವಾದ ಮೂಲೆ ಮೂಲೆಯಿಂದ ಬರುತ್ತಿರುವುದು ಸಂತಸ ತಂದಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement