ಚಿಲ್ಲರೆ ಕ್ಷೇತ್ರದಲ್ಲಿ ಎಫ್ಡಿಐ: ಅನುಮತಿ ವಾಪಸ್ ಪಡೆದ ದೆಹಲಿ ಸರ್ಕಾರ
ಚಿಲ್ಲರೆ ಕ್ಷೇತ್ರದಲ್ಲಿ ನೇರ ಬಂಡವಾಳ ಹೂಡಿಕೆಗೆ ನೀಡಿದ್ದ ಅನುಮತಿಯನ್ನು ದೆಹಲಿ ಸರ್ಕಾರ ಸೋಮವಾರ ವಾಪಸ್ ಪಡೆದಿದೆ...
ನವದೆಹಲಿ: ಚಿಲ್ಲರೆ ಕ್ಷೇತ್ರದಲ್ಲಿ ನೇರ ಬಂಡವಾಳ ಹೂಡಿಕೆಗೆ ನೀಡಿದ್ದ ಅನುಮತಿಯನ್ನು ದೆಹಲಿ ಸರ್ಕಾರ ಸೋಮವಾರ ವಾಪಸ್ ಪಡೆದಿದೆ.
ರಾಷ್ಟ್ರದ ರಾಜಧಾನಿಯಾದ ದೆಹಲಿಯಲ್ಲಿ ಚಿಲ್ಲರೆ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಅನುಮತಿ ನೀಡಲಾಗಿತ್ತು. ಆದರೆ ಇಂದು ಆಮ್ ಆದ್ಮಿ ಪಕ್ಷದ ದೆಹಲಿ ಸರ್ಕಾರ ಎಫ್ಡಿಐ ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆದಿದೆ.
ಆಂಧ್ರಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕ ಸರ್ಕಾರಗಳು ನೇರ ಬಂಡವಾಳ ಹೂಡಿಕೆಗೆ ಅನುಮತಿ ನೀಡಿದ್ದವು. ದೆಹಲಿಯಲ್ಲಿ ಶೀಲಾ ದೀಕ್ಷಿತ್ ಅವಧಿಯಲ್ಲಿ ಎಫ್ಡಿಐಗೆ ನೀಡಲಾಗಿದ್ದ ಅನುಮತಿಯನ್ನು ಪ್ರಸ್ತುತ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹಿಂಪಡೆದಿದ್ದಾರೆ.