ರಾಜಸ್ಥಾನದ ಕಾಂಗ್ರೆಸ್ ಅಧ್ಯಕ್ಷರಾಗಿ ಸಚಿನ್ ಪೈಲೆಟ್ ನೇಮಕ
ನವದೆಹಲಿ: 2014ರ ಲೋಕಸಭಾ ಚುನಾವಣೆ ಅಣಿಯಾಗುತ್ತಿರುವ ಕಾಂಗ್ರೆಸ್ ಸೋಮವಾರ ಸಚಿನ್ ಪೈಲೆಟ್ ಅವರನ್ನು ರಾಜಸ್ಥಾನದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಕಾರ್ಪೋರೇಟ್ ವ್ಯವಹಾರಗಳ ಸಚಿವ ಸಚಿನ್ ಪೈಲೆಟ್ ಅವರನ್ನು ರಾಜಸ್ಥಾನದ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ಧನ ದ್ವಿವೇಧಿ ಹೇಳಿದ್ದಾರೆ.
36ವರ್ಷದ ಸಚಿನ್ ಪೈಲೆಟ್ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಆಪ್ತರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.