ಗುಲ್ಬರ್ಗಾ ಶೂಟೌಟ್ ಪ್ರಕರಣ: ಪಿಎಸ್ಐ ಬಂಡೆ ಸ್ಥಿತಿ ಗಂಭೀರ
ಗುಲ್ಬರ್ಗಾದಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪಿಎಸ್ಐ ಮಲ್ಲಿಕಾರ್ಜುನ್ ಬಂಡೆ ಸ್ಥಿತಿ..
ಹೈದರಾಬಾದ್: ಗುಲ್ಬರ್ಗಾದಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪಿಎಸ್ಐ ಮಲ್ಲಿಕಾರ್ಜುನ್ ಬಂಡೆ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಂಗಳವಾರ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಹೈದರಾಬಾದ್ನ ಯಶೋದಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಂಡೆಯವರ ಆರೋಗ್ಯ ಸ್ಥಿತಿ ಇಂದು ಮತ್ತಷ್ಟು ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಿಕೊಡಬೇಕು ಎಂದು ಅವರ ಕುಟುಂಬದವರು ಮತ್ತು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಂಡೆಯವರ ಚಿಕಿತ್ಸೆ ಬಗ್ಗೆ ವೈದ್ಯರು ಇನ್ನು ವರದಿ ನೀಡಿಲ್ಲ. ವರದಿ ನೀಡಿದ ಬಳಿಕ ವಿದೇಶಕ್ಕೆ ಕಳುಹಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮೈಸೂರಿನಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ.
ಈ ಮಧ್ಯೆ, ಬೆಂಗಳೂರಿನಿಂದ ನಿಮ್ಹಾನ್ಸ್ ವೈದ್ಯರು ಚಿಕಿತ್ಸೆಗಾಗಿ ಹೈದರಾಬಾದ್ಗೆ ತೆರಳಿದ್ದಾರೆ.