ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೋದಿ ಗುಣಗಾನ ಮಾಡಿದ ಸಲ್ಮಾನ್ ಖಾನ್

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಮಂಗಳವಾರ ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ...

(Picture courtesy: Narendra Modi on Twitter)
Lingaraj Badiger
Updated On : 14 Jan 2014, 10:19 am

ಅಹಮದಾಬಾದ್: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಮಂಗಳವಾರ ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಅವರನ್ನು ಹಾಡಿ ಹೊಗಳಿದ್ದಾರೆ.

ಇಂದು ಅಹಮಬಾದ್‌ನಲ್ಲಿ ನಡೆದ ಅಂತರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ಮೋದಿ ಅವರೊಂದಿಗೆ ನಟ ಸಲ್ಮಾನ್ ಖಾನ್ ಸಹ ಭಾಗವಹಿಸಿದ್ದರು.

ಉತ್ಸವದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಲ್ಲು, ನಾನು ಮೊದಲ ಬಾರಿಗೆ ಮೋದಿಯವರನ್ನು ಭೇಟಿ ಮಾಡಿದ್ದೇನೆ. ಈ ಭೇಟಿ ನನಗೆ ಖುಷಿ ತಂದಿದೆ ಎಂದಿದ್ದಾರೆ.

ಉತ್ತಮ ವ್ಯಕ್ತಿ ಈ ದೇಶದ ಮುಂದಿನ ಪ್ರಧಾನಿಯಾಗಲಿದ್ದು, ಮೋದಿಯವರು ದೇಶದ ನಾಯಕತ್ವ ವಹಿಸಿಕೊಳ್ಳಲು ಸಮರ್ಥ ವ್ಯಕ್ತಿ ಎಂದು ಸಲ್ಲು ಬಿಜೆಪಿ ಪ್ರಧಾನಿ ಅಭ್ಯರ್ಥಿಯ ಗುಣಗಾನ ಮಾಡಿದರು.

ಮೋದಿ ಅವರ ಜತೆಗಿನ ಕ್ಷಣಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಸಲ್ಮಾನ್, ಅವರೊಬ್ಬ ಅದ್ಭುತ ವ್ಯಕ್ತಿ. ಅವರನ್ನು ಮತ್ತೆ ಭೇಟಿಯಾಗಲು ಬಯಸುತ್ತೇನೆ. ಮೋದಿ ಅವರು ಗುಜರಾತ್‌ಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರಿಗೆ ಎಲ್ಲ ಯಶಸ್ಸೂ ಸಿಗಲಿ ಎಂದು ಸಲ್ಮಾನ್ ಹಾರೈಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement