ಯಾವುದೇ ಜವಾಬ್ದಾರಿ ನಿರ್ವಹಿಸುವ ಸಾಮರ್ಥ್ಯ ರಾಹುಲ್ಗಿಲ್ಲ: ಎಎಪಿ
ಅಮೆಥಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಆಮ್ ಆದ್ಮಿ ಪಕ್ಷ(ಎಎಪಿ), ರಾಹುಲ್ ಗಾಂಧಿಗೆ ದೇಶದಲ್ಲಿ ಯಾವುದೇ ಜವಾಬ್ದಾರಿ ನಿರ್ವಹಿಸುವ ಸಾಮರ್ಥ್ಯ ಇಲ್ಲ ಎಂದು ಮಂಗಳವಾರ ಹೇಳಿದೆ.
ಅಂತ್ಯಾಚಾರ ಪ್ರಕರಣಗಳಂತಹ ಸೂಕ್ಷ್ಮ ವಿಚಾರಗಳನ್ನು ನಿರ್ವಹಿಸುವಲ್ಲಿ ವಿಫಲವಾಗಿರುವ ರಾಹುಲ್ ಗಾಂಧಿಗೆ ಯಾವುದೇ ಜವಾಬ್ದಾರಿಗಳನ್ನು ವಹಿಸಿಕೊಳ್ಳುವ ಸಾಮರ್ಥ್ಯ ಇಲ್ಲ ಎಂದು ಎಎಪಿ ನಾಯಕ ಕುಮಾರ್ ವಿಶ್ವಾಸ್ ಅವರು ಹೇಳಿದ್ದಾರೆ.
ಇಂದು ಬೆಳಗ್ಗೆಯಷ್ಟೆ ರಾಹುಲ್ ಗಾಂಧಿ ಅವರು ತಾವು ಪ್ರಧಾನಿ ಹುದ್ದೆ ಸೇರಿದಂತೆ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ನಿಭಾಯಿಸಲು ಸಿದ್ಧ ಎಂದಿದ್ದರು. ಇದಕ್ಕೆ ತಿರುಗೇಟು ನೀಡಿರುವ ಆಪ್ ನಾಯಕ, ಗಂಭೀರ ಪ್ರಕರಣಗಳ ಬಗ್ಗೆ ಅವರು ಯಾವತ್ತೂ ಸಂಸತ್ತಿನ ಹೊರಗೆ ಧ್ವನಿ ಎತ್ತಿಲ್ಲ. ಹೀಗಾಗಿ ದೇಶದ ಜನತೆ ಅವರ 'ಕೈ' ಅಧಿಕಾರ ನೀಡುವುದಿಲ್ಲ ಎಂದು ಹೇಳಿದ್ದಾರೆ.