ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪಿಎಸ್‌ಐ ಮಲ್ಲಿಕಾರ್ಜನ ಬಂಡೆ ವಿಧಿವಶ

ಸುಫಾರಿ ಹಂತಕ ಮುನ್ನಾ ಜೊತೆಗಿನ ಗುಂಡಿನ ಕಾಳಗದಲ್ಲಿ ಗುಂಡೇಟಿನಿಂದ ಗಾಯಗೊಂಡಿದ್ದ ಪಿಎಸ್‌ಐ ಮಲ್ಲಿಕಾರ್ಜನ ಬಂಡೆ...

Mainashree
Updated On : 15 Jan 2014, 1:05 am

ಗುಲ್ಬರ್ಗ: ಸುಫಾರಿ ಹಂತಕ ಮುನ್ನಾ ಜೊತೆಗಿನ ಗುಂಡಿನ ಕಾಳಗದಲ್ಲಿ ಗುಂಡೇಟಿನಿಂದ ಗಾಯಗೊಂಡಿದ್ದ ಪಿಎಸ್‌ಐ ಮಲ್ಲಿಕಾರ್ಜನ ಬಂಡೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ನಿಧನರಾಗಿದ್ದಾರೆ.

ಗುಂಡೇಟಿನಿಂದ ಗಾಯಗೊಂಡು ಹೈದ್ರಾಬಾದ್‌ನ ಯಶೋಧರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.

ನಾಳೆ ಗುಲಬರ್ಗಾ ನಗರಕ್ಕೆ ಪಾರ್ಥೀವ ಶರೀರ ತರಲಾಗುತ್ತದೆ. ಬಂಡೆ ಅವರ ಸ್ವಗ್ರಾಮ ಖಜೂರಿಯಲ್ಲಿ ನಾಳೆ ಸಂಜೆ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಮಲ್ಲಿಕಾರ್ಜನ್ ಅವರ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ.

ಬಂಡೆ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಬೇಕೆಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ಜಿಲ್ಲಾಡಳಿತ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡಸುತ್ತಿದ್ದಾರೆ. ಆದರೆ ಇದಕ್ಕೆ ಒಪ್ಪದ ಬಂಡೆ ಅವರ ಪತ್ನಿ ಇದಕ್ಕೆ ರಾಜಕೀಯ ಬಣ್ಣ ಬರುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement