ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಎಎಪಿ ಕಾಂಗ್ರೆಸ್‌ನ ಮತ್ತೊಂದು ತಂಡ: ಬಿನ್ನಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಂಡಾಯವೆದ್ದಿರುವ ಆಮ್ ಆದ್ಮಿ ಪಕ್ಷದ ಶಾಸಕ..

Lingaraj Badiger
Updated On : 16 Jan 2014, 12:54 pm

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಂಡಾಯವೆದ್ದಿರುವ ಆಮ್ ಆದ್ಮಿ ಪಕ್ಷದ ಶಾಸಕ ವಿನೋದ್ ಕುಮಾರ್ ಬಿನ್ನಿ, ಎಎಪಿ ಕಾಂಗ್ರೆಸ್‌ನ ಮತ್ತೊಂದು ತಂಡ ಎಂದು ಗುರುವಾರ ಗಂಭೀರ ಆರೋಪ ಮಾಡಿದ್ದಾರೆ.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿನ್ನಿ, ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚಿಸುವ ಮೂಲಕ ಎಎಪಿ ತನ್ನ ಸಿದ್ಧಾಂತಗಳನ್ನು ಗಾಳಿಗೆ ತೂರಿ, ಅಡ್ಡದಾರಿ ಹಿಡಿದಿದೆ. ಅಲ್ಲದೆ ತೆರೆಯ ಹಿಂದೆ ಕಾಂಗ್ರೆಸ್ ಜೊತೆ ಎಎಪಿ ಸಂಬಂಧ ಹೊಂದಿದೆ ಎಂದು ಆರೋಪಿಸಿದ್ದಾರೆ.

ಎಎಪಿ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ ಬಿನ್ನಿ, ಒಂದು ವೇಳೆ ಕೇಜ್ರಿವಾಲ್ ಸರ್ಕಾರ ಭರವಸೆಗಳನ್ನು ಈಡೇರಿಸದಿದ್ದರೆ ಜ.27ರಿಂದ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಇದೇ ವೇಳೆ ಕೇಜ್ರಿವಾಲ್ ವಿರದ್ಧವೂ ವಾಗ್ದಾಳಿ ನಡೆಸಿದ ಬಿನ್ನಿ, ಕೇಜ್ರಿವಾಲ್ ದೆಹಲಿ ಜನತೆಗೆ ಸುಳ್ಳು ಭರವಸೆಗಳನ್ನು ನೀಡಿ, ದಿಕ್ಕುತಪ್ಪಿಸುತ್ತಿದ್ದಾರೆ. ಅವರೊಬ್ಬ ಮಹಾನ್ ಸುಳ್ಳುಗಾರ ಎಂದಿದ್ದಾರೆ. ಅಲ್ಲದೆ ಕೇಜ್ರಿವಾಲ್ ಸ್ವರಾಜ್ಯ ಕನಸು ಎಲ್ಲಿ ಹೋಗಿದೆ ಎಂದು ಪ್ರಶ್ನಿಸಿದ್ದಾರೆ.

ಉಚಿತ ನೀರು ಯೋಜನೆಯಲ್ಲೂ ಕೇಜ್ರಿವಾಲ್ ಜನರಿಗೆ ವಂಚಿಸಿದ್ದಾರೆ. ಇಲ್ಲಿಯವರೆಗೂ ನೀರಿನ ಬಿಲ್‌ಗೆ ವಿನಾಯಿತಿ ನೀಡಿಲ್ಲ ಎಂದು ಬಿನ್ನಿ ತಿಳಿಸಿದ್ದಾರೆ.

ಕೇಜ್ರಿವಾಲ್ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು, ಸರ್ಕಾರದ ಎಲ್ಲ ಮಹತ್ವದ ನಿರ್ಧಾರಗಳನ್ನು ನಾಲ್ಕೈದು ಜನರಿಂದ ನಾಲ್ಕು ಗೋಡೆಯ ಮಧ್ಯೆಯೇ ತೆಗೆದುಕೊಳ್ಳಲಾಗುತ್ತಿದೆ. ದೆಹಲಿಯ 7 ಲೋಕಸಭಾ ಕ್ಷೇತ್ರಗಳಿಗೆ ಈಗಾಗಲೇ ಎಎಪಿ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದ್ದು, ಟೆಕೆಟ್ ಹಂಚಿಕೆಯಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಬಿನ್ನಿ ಆರೋಪಿಸಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ಮಧ್ಯೆ ಬಿನ್ನಿ ಅವರು ಬಿಜೆಪಿ ಜತೆ ಮಾತುಕತೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ. ಬಿನ್ನಿ ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement